Some error occurred
ಅಥವಾ

ಒಟ್ಟು 190 ಕಡೆಗಳಲ್ಲಿ , 46 ವಚನಕಾರರು , 177 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು1321743111121412171241224651413921915717315114311ಒಟ್ಟು10ಅಕ್ಕಮಹಾದೇವಿ28ಅಕ್ಕಮ್ಮ37ಅಂಬಿಗರಚೌಡಯ್ಯ18ಅರಿವಿನಮಾರಿತಂದೆ3ಅಲ್ಲಮಪ್ರಭುದೇವರು55ಅವಸರದರೇಕಣ್ಣ36ಆದಯ್ಯ125ಆಯ್ದಕ್ಕಿಮಾರಯ್ಯ152ಉಪ್ಪರಗುಡಿಯಸೋಮಿದೇವಯ್ಯ142ಏಕಾಂತರಾಮಿತಂದೆ14ಏಲೇಶ್ವರಕೇತಯ್ಯ175ಕನ್ನಡಿಕಾಯಕದರೇಮಮ್ಮ 15ಕೋಲಶಾಂತಯ್ಯ 16ಗುಪ್ತಮಂಚಣ್ಣ 72ಘನಲಿಂಗಿದೇವ 58ಚಂದಿಮರಸ 7ಚನ್ನಬಸವಣ್ಣ123ಜಂಗಮಲಿಂಗಪ್ರಭುವೆ83ಡಕ್ಕೆಯಬೊಮ್ಮಣ್ಣ 46ತುರುಗಾಹಿರಾಮಣ್ಣ 30ತೋಂಟದಸಿದ್ಧಲಿಂಗಶಿವಯೋಗಿಗಳು 27ದಾಸೋಹದಸಂಗಣ್ಣ 11ದೇಶಿಕೇಂದ್ರಸಂಗನಬಸವಯ್ಯ 112ಪ್ರಸಾದಿಭೋಗಣ್ಣ 1ಬಸವಣ್ಣ39ಬಹುರೂಪಿಚೌಡಯ್ಯ 81ಬಿಬ್ಬಿಬಾಚಯ್ಯ74ಭರಿತಾರ್ಪಣದಚೆನ್ನಬಸವಣ್ಣ 13ಮಧುವಯ್ಯ49ಮನಸಂದಮಾರಿತಂದೆ 67ಮನುಮುನಿಗುಮ್ಮಟದೇವ118ಮಾದಾರಚೆನ್ನಯ್ಯ 8ಮಾದಾರಧೂಳಯ್ಯ 64ಮುಮ್ಮಡಿಕಾರ್ಯೇಂದ್ರ/ಮುಮ್ಮಡಿಕಾರ್ಯಕ್ಷಿತೀಂದ್ರ 23ಮೆರೆಮಿಂಡಯ್ಯ29ಮೋಳಿಗೆಮಹಾದೇವಿ 19ಮೋಳಿಗೆಮಾರಯ್ಯ 119ವೀರಗೊಲ್ಲಾಳ/ಕಾಟಕೋಟ 180ಶಂಕರದಾಸಿಮಯ್ಯ 62ಶಿವಲೆಂಕಮಂಚಣ್ಣ99ಸಕಳೇಶಮಾದರಸ 40ಸಗರದಬೊಮ್ಮಣ್ಣ 5ಸಿದ್ಧರಾಮೇಶ್ವರ71ಸುಂಕದಬಂಕಣ್ಣ 42ಸ್ವತಂತ್ರಸಿದ್ಧಲಿಂಗ 107ಹಾವಿನಹಾಳಕಲ್ಲಯ್ಯ02040
ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು, ನಿಂದಲ್ಲಿ ನಿಲಲೀಯದೆನ್ನ ಮನವು, ಹೊಂದಿದಲ್ಲಿ ಹೊಂದಲೀಯದೆನ್ನ ಮನವು ಕೂಡಲಸಂಗಮದೇವಾ ನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು, ನಿಮ್ಮ ಧರ್ಮ. 32
--------------
ಬಸವಣ್ಣ
ಕಂಡೆನಯ್ಯಾ, ಕಂಗಳೊಳಗೊಂದು ಹೆಸರಿಡಬಾರದು ವಸ್ತುವ. ಅದು ನಿಂದಲ್ಲಿ ನಿಲ್ಲದು, ಬಂದಲ್ಲಿ ಬಾರದು, ಹೊದ್ದಿದಲ್ಲಿ ಹೊದ್ದದು. ಇದರ ಸಂದುಸಂಶಯದಿಂದ ನಂಬಿಯೂ ನಂಬದಿನ್ನೇವೆ ? ಕಾಬಡೆ ಕಂಗಳಲ್ಲಿ ನಿಲ್ಲದು, ನೆನೆವಡೆ ಮನದಲ್ಲಿ ನಿಲ್ಲದು, ಹೊಡೆವಡೆ ಕೈಯೊಳಗಲ್ಲ. ಇದರ ಕೂಟದ ಕುಶಲವ ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಧರೆ ಆಕಾಶವಿಲ್ಲದಿರೆ, ಆಡುವ ಘಟಪಟ, ಚರಸ್ಥಾವರ, ಆಡುವ ಚೇತನಾದಿಗಳಿರಬಲ್ಲವೆ ? ವಸ್ತುವಿನ ಸಾಕಾರವೆ ಭೂಮಿಯಾಗಿ, ಆ ವಸ್ತುವಿನ ಆಕಾಶವೆ ಶಲಾಕೆ ರೂಪಾಗಿ, ಸಂಘಟಿಸಲಾಗಿ ಜೀವಕಾಯವಾಯಿತ್ತು. ಇಂತೀ ರೂಪಿಂಗೆ ರೂಪುಪೂಜೆ, ಅರಿವಿಂಗೆ ಜ್ಞಾನಪೂಜೆ. ಉಭಯವು ನಿಂದಲ್ಲಿ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗ, ಏನೂ ಎನಲಿಲ್ಲ.
--------------
ಶಿವಲೆಂಕ ಮಂಚಣ್ಣ
ಪ್ರಮಥವೇದಿಗಳೆಲ್ಲರೂ ಗತಿಯಲೆ ಸಿಲುಕಿದರು. ಅತೀತ ಅನಾಗತವೆಂಬ ನುಡಿಯಲೆ ಸಿಲುಕಿದರು. ಶ್ರುತಿವಂತರೆಲ್ಲರೂ ಆಗಮದಲ್ಲಿ ಸಿಲುಕಿದರು. ಇಂಥವನೆ ಲಿಂಗೈಕ್ಯನು ? ನುಡಿದ ನುಡಿಯ ನಡೆಯನು, ನಡೆದ ನಡೆಯ ನುಡಿಯನು, ಬಂದಲ್ಲಿ ಬಾರನು, ನಿಂದಲ್ಲಿ ನಿಲ್ಲನು, ನಿಸ್ಸೀಮನು ಕೂಡಲಚೆನ್ನಸಂಗಾ ಲಿಂಗೈಕ್ಯನು.
--------------
ಚನ್ನಬಸವಣ್ಣ
ಅಯ್ಯ ಪಂಚತತ್ವಂಗಳ ಪಡೆವ ತತ್ವ ಪ್ರತ್ಯಕ್ಷವಾಗದ ಮುನ್ನ, ಪದ್ಮಜಾಂಡವ ಧರಿಸಿಪ್ಪ ಕಮಠ-ದಿಕ್ಕರಿಗಳಿಲ್ಲದ ಮುನ್ನ, ನಿರ್ಮಲಾಕಾಶವೇ ಸಾಕಾರವಾಗಿ ನಿರಂಜನವೆಂಬ ಪ್ರಣವವಾಯಿತ್ತಯ್ಯ ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ಹ್ರೂಂಕಾರ ಮಂಟಪದಲ್ಲಿ ಮೂರ್ತಿಗೊಂಡಿತಯ್ಯ. ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ತನ್ನ ನಿರಂಜನ ಶಕ್ತಿಯ ನಸುನೆನಹಿಂದ ಹಂಕಾರ ಚಕ್ಷುವೆಂಬ ಕುಹರಿಯಲ್ಲಿ ಶುದ್ಧಪ್ರಸಾದವೆಂಬ ಮೊಳೆದೋರಿತ್ತಯ್ಯ. ಆ ಶುದ್ಧ ಪ್ರಸಾದವೆಂಬ ಮೊಳೆ ತನ್ನ ಶೂನ್ಯಶಕ್ತಿಯ ಸೆಜ್ಜೆಯಿಂದ ಕರ್ಣಿಕಾಪ್ರಕಾಶ ಪಂಚನಾದವನುಳ್ಳ ಷೋಡಶ ಕಲಾಪುಂಜರಂಜಿತವಪ್ಪ ಹನ್ನೊಂದನೂರುದಳದ ಪತ್ರದಲ್ಲಿ ಪ್ರಣವಚಿತ್ರವೊಪ್ಪಿತ್ತಿಪ್ಪ ಹ್ರೀಂಕಾರ ಸಿಂಹಾಸನದ ಮೇಲೆ ಸಿದ್ಧಪ್ರಸಾದವೆಂಬ ಎಳವೆರೆ ತಳಿರಾಯಿತ್ತಯ್ಯ. ಆ ಸಿದ್ಧಪ್ರಸಾದವೆಂಬ ಎಳವೆರೆ ತನ್ನ ಶಾಂತಶಕ್ತಿಯ ಚಲನೆಯಿಂದ ಮೂರುಬಟ್ಟೆಯ ಮೇಲಿಪ್ಪ ಎರಡುಮಂಟಪದ ಮಧ್ಯದಲ್ಲಿ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ಬೀಗಿ ಬೆಳೆಯಿತ್ತಯ್ಯ. ಆ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ತನ್ನ ಚಿಚ್ಛಕ್ತಿಯ ಲೀಲಾವಿನೋದದಿಂದ ಪಂಚಶಕ್ತಿಗಳೆಂಬ ನಾಲ್ಕೊಂದು ಹೂವಾಯಿತು. ಆ ಹೂಗಳ ಮಹಾಕೂಟದಿಂದ ಪಂಚಲಿಂಗಗಳೆಂಬ ಪಂಚಪ್ರಕಾರದ ಮೂರೆರಡು ಹಣ್ಣಾಯಿತು. ಆ ಹಣ್ಣುಗಳ ಆದ್ಯಂತಮಂ ಪಿಡಿದು ಸದ್ಯೋನ್ಮುಕ್ತಿಯಾಗಬೇಕೆಂದು ಸದಾಕಾಲದಲ್ಲಿ ಬಯಸುತ್ತಿಪ್ಪ ಮಹಾಶಿವಶರಣನು ತಿಳಿದು ನೋಡಿ ಕಂಡು ಆರುನೆಲೆಯ ನಿಚ್ಚಣಿಗೆಯ ಆ ತರುಲತೆಗೆ ಸೇರಿಸಿ ಜ್ಞಾನ ಕ್ರೀಗಳೆಂಬ ದೃಢದಿಂದೇರಿ ನಾಲ್ಕೆಲೆಯ ಪೀತವರ್ಣದ ಹಣ್ಣ ಸುಚಿತ್ತವೆಂಬ ಹಸ್ತದಲ್ಲಿ ಪಿಡಿದು ಆರೆಲೆಯ ನೀಲವರ್ಣದ ಹಣ್ಣ ಸುಬುದ್ಧಿಯೆಂಬ ಹಸ್ತದಲ್ಲಿ ಪಿಡಿದು ಹತ್ತೆಲೆಯ ಸ್ಫಟಿಕವರ್ಣದ ಹಣ್ಣ ನಿರಹಂಕಾರವೆಂಬ ಹಸ್ತದಲ್ಲಿ ಪಿಡಿದು ಹನ್ನೆರೆಡೆಲೆಯ ಸುವರ್ಣವರ್ಣದ ಹಣ್ಣ ಸುಮನನೆಂಬ ಹಸ್ತದಲ್ಲಿ ಪಿಡಿದು ಹದಿನಾರೆಲೆಯ ಮಿಂಚುವರ್ಣದ ಹಣ್ಣ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಆಸನಸ್ಥಿರವಾಗಿ ಕಣ್ಮುಚ್ಚಿ ಜ್ಞಾನಚಕ್ಷುವಿನಿಂ ನಿಟ್ಟಿಸಿ ಕಟ್ಟಕ್ಕರಿಂ ನೋಡಿ ರೇಚಕ ಪೂರಕ ಕುಂಭಕಂಗೈದು ಪೆಣ್ದುಂಬಿಯ ನಾದ ವೀಣಾನಾದ ಘಂಟನಾದ ಭೇರೀನಾದ ಮೇಘನಾದ ಪ್ರಣವನಾದ ದಿವ್ಯನಾದ ಸಿಂಹನಾದಂಗಳಂ ಕೇಳಿ ಹರುಷಂಗೊಂಡು ಆ ಫಲಂಗಳಂ ಮನವೆಂಬ ಹಸ್ತದಿಂ ಮಡಿಲುದುಂಬಿ ಮಾಯಾಕೋಲಾಹಲನಾಗಿ ಪಂಚಭೂತಂಗಳ ಸಂಚವ ಕೆಡಿಸಿ ದಶವಾಯುಗಳ ಹೆಸಗೆಡಿಸಿ ಅಷ್ಟಮದಂಗಳ ಹಿಟ್ಟುಗುಟ್ಟಿ ಅಂತಃಕರಣಂಗಳ ಚಿಂತೆಗೊಳಗುಮಾಡಿ ಮೂಲಹಂಕಾರವ ಮುಂದುಗೆಡಿಸಿ ಸಪ್ತವ್ಯಸನಂಗಳ ತೊತ್ತಳದುಳಿದು ಜ್ಞಾನೇಂದ್ರಿಯಂಗಳ ನೆನಹುಗೆಡಿಸಿ ಕರ್ಮೇಂದ್ರಿಯಂಗಳ ಕಾಲಮುರಿದು ತನ್ಮಾತ್ರೆಯಂಗಳ ತೋಳಕೊಯ್ದು, ಅರಿಷಡ್ವರ್ಗಂಗಳ ಕೊರಳನರಿದು ಸ್ಫಟಿಕದ ಪುತ್ಥಳಿಯಂತೆ ನಿಜಸ್ವರೂಪಮಾಗಿ- ಎರಡೆಸಳ ಕಮಲಕರ್ಣಿಕಾಗ್ರದಲ್ಲಿಪ್ಪ ಪರಬ್ರಹ್ಮದ ಶ್ವೇತಮಾಣಿಕ್ಯವರ್ಣದ ದ್ವಿಪಾದಮಂ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಓಂಕಾರವೆಂಬ ಮಂತ್ರದಿಂದ ಸಂತೈಸಿ ನೀರ ನೀರು ಕೂಡಿದಂತೆ ಪರಬ್ರಹ್ಮವನೊಡಗೂಡಿ ಆ ಪರಬ್ರಹ್ಮವೆ ತಾನೆಯಾಗಿ ಬ್ರಹ್ಮರಂಧ್ರವೆಂಬ ಶಾಂಭವಲೋಕದಲ್ಲಿಪ್ಪ ನಿಷ್ಕಲ ಪರಬ್ರಹ್ಮದ ನಿರಾಕಾರಪಾದಮಂ ನಿರ್ಭಾವವೆಂಬ ಹಸ್ತದಿಂ ಪಿಡಿದು ಪಂಚಪ್ರಸಾದವೆಂಬ ಮಂತ್ರದಿಂ ಸಂತೈಸಿ ಕ್ಷೀರಕ್ಷೀರವ ಕೂಡಿದಂತೆ ನಿಷ್ಕಲಬ್ರಹ್ಮವನೊಡಗೂಡಿ ಆ ನಿಷ್ಕಲಬ್ರಹ್ಮವೇ ತಾನೆಯಾಗಿ ಮೂರುಮಂಟಪದ ಮಧ್ಯದ ಕುಸುಮಪೀಠದಲ್ಲಿಪ್ಪ ಶೂನ್ಯಬ್ರಹ್ಮದ ಶೂನ್ಯಪಾದಮಂ ನಿಷ್ಕಲವೆಂಬ ಹಸ್ತದಿಂ ಪಿಡಿದು ಕ್ಷಕಾರವೆಂಬ ಮಂತ್ರದಿಂ ಸಂತೈಸಿ ಘೃತಘೃತವ ಕೂಡಿದಂತೆ ಶೂನ್ಯಬ್ರಹ್ಮವನೊಡಗೂಡಿ ಆ ಶೂನ್ಯಬ್ರಹ್ಮವೇ ತಾನೆಯಾಗಿ- `ನಿಶಬ್ದಂ ಬ್ರಹ್ಮ ಉಚ್ಯತೇ' ಎಂಬ ಒಂಬತ್ತು ನೆಲೆಯ ಮಂಟಪದೊಳಿಪ್ಪ ನಿರಂಜನಬ್ರಹ್ಮದ ನಿರಂಜನಪಾದಮಂ ಶೂನ್ಯವೆಂಬ ಹಸ್ತದಿಂ ಪಿಡಿದು ಹ್ರೂಂಕಾರವೆಂಬ ಮಂತ್ರದಿಂ ಸಂತೈಸಿ ಬಯಲ ಬಯಲು ಬೆರಸಿದಂತೆ ನಿರಂಜನಬ್ರಹ್ಮವೇ ತಾನೆಯಾಗಿ- ಮಹಾಗುರು ಸಿದ್ಧಲಿಂಗಪ್ರಭುವಿನ ಗರ್ಭಾಬ್ಧಿಯಲ್ಲಿ ಜನಿಸಿದ ಬಾಲಕಿಯಯ್ಯ ನಾನು. ಎನ್ನ ಹೃದಯಕಮಲೆಂಟು ಮಂಟಪದ ಚತುಷ್ಪಟ್ಟಿಕಾ ಮಧ್ಯದ ಪದ್ಮಪೀಠದಲ್ಲಿ ಎನ್ನ ತಂದೆ ಸುಸ್ಥಿರವಾಗಿ ಎನಗೆ ಷಟ್ಸ ್ಥಲಮಾರ್ಗ-ಪುರಾತರ ವಚನಾನುಭಾವ- ಭಕ್ತಿ ಜ್ಞಾನ ವೈರಾಗ್ಯವೆಂಬ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಿದನಯ್ಯ. ಆ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಲೊಡನೆ ಎನ್ನ ಬಾಲತ್ವಂ ಕೆಟ್ಟು ಯೌವನಂ ಬಳೆದು ಬೆಡಗು ಕುಡಿವರಿದು ಮೀಟು ಜವ್ವನೆಯಾದೆನಯ್ಯ ನಾನು. ಎನಗೆ ನಿಜಮೋಕ್ಷವೆಂಬ ಮನ್ಮಥವಿಕಾರವು ಎನ್ನನಂಡಲೆದು ಆಳ್ದು ನಿಂದಲ್ಲಿ ನಿಲಲೀಸದಯ್ಯ. ಅನಂತಕೋಟಿ ಸೋಮಸೂರ್ಯ ಪ್ರಕಾಶವನುಳ್ಳ ಪರಂಜ್ಯೋತಿಲಿಂಗವೆ ಎನಗೆ ಶಿವಾನಂದ ಭಕ್ತಿಯೆಂಬ ತಾಲಿಬಂದಿಯ ಕಟ್ಟು ಸುಮಂತ್ರವಲ್ಲದೆ ಕುಮಂತ್ರವ ನುಡಿಯೆನೆಂಬ ಕಂಠಮಾಲೆಯಂ ಧರಿಸು. ಅರ್ಪಿತವಲ್ಲದೆ ಅನರ್ಪಿತವ ಪರಿಮಳಿಸೆನೆಂಬ ಮೌಕ್ತಿಕದ ಕಟ್ಟಾಣಿ ಮೂಗುತಿಯನಿಕ್ಕು. ಸುಶಬ್ಧವಲ್ಲದೆ ಅಪಶಬ್ದವ ಕೇಳೆನೆಂಬ ರತ್ನದ ಕರ್ಣಾಭರಣಂಗಳಂ ತೊಡಿಸು. ಶರಣತ್ವವನಲ್ಲದೆ ಜೀವತ್ವವನೊಲ್ಲೆನೆಂಬ ತ್ರಿಪುಂಡ್ರಮಂ ಧರಿಸು. ಕ್ರೀಯಲ್ಲದೆ ನಿಷ್ಕಿ ್ರೀಯ ಮಾಡೆನೆಂಬ ಮೌಕ್ತಿಕದ ಬಟ್ಟನಿಕ್ಕು. ನಿಮ್ಮವರಿಗಲ್ಲದೆ ಅನ್ಯರಿಗೆರಗೆನೆಂಬ ಕನಕಲತೆಯ ಬಾಸಿಂಗಮಂ ಕಟ್ಟು. ಸಮ್ಯಜ್ಞಾನವಲ್ಲದ ಅಜ್ಞಾನವ ಹೊದ್ದೆನೆಂಬ ನವ್ಯದುಕೂಲವನುಡಿಸು. ಲಿಂಗಾಣತಿಯಿಂದ ಬಂದುದನಲ್ಲದೆ ಅಂಗಗತಿಯಿಂದ ಬಂದುದಂ ಮುಟ್ಟೆನೆಂಬ ರತ್ನದ ಕಂಕಣವಂ ಕಟ್ಟು. ಶರಣಸಂಗವಲ್ಲದೆ ಪರಸಂಗಮಂ ಮಾಡೆನೆಂಬ ಪರಿಮಳವಂ ಲೇಪಿಸು. ಶಿವಪದವಲ್ಲದೆ ಚತುರ್ವಿಧಪದಂಗಳ ಬಯಸೆನೆಂಬ ಹಾಲು ತುಪ್ಪಮಂ ಕುಡಿಸು. ಪ್ರಸಾದವಲ್ಲದೆ ಬ್ಥಿನ್ನರುಚಿಯಂ ನೆನೆಯೆನೆಂಬ ತಾಂಬೂಲವನಿತ್ತು ಸಿಂಗರಂಗೆಯ್ಯ. ನಿನ್ನ ಕರುಣಪ್ರಸಾದವೆಂಬ ವಸವಂತ ಚಪ್ಪರದಲ್ಲಿ ಪ್ರಮಥಗಣಂಗಳ ಮಧ್ಯದಲ್ಲಿ ಎನ್ನ ಮದುವೆಯಾಗಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಇಷ್ಟಗುಟ್ಟೆಂಬುದು, ನಿಶ್ಚಯ ವಸ್ತುವೆಂಬುದು, ಆತ್ಮನೇಕವೆಂಬುದು, ಇಂದ್ರಿಯಂಗಳು ಹಲವೆಂಬುದು, ಅರಿವು ಹಿಂಗಲಿಕೆ ಒಂದೆಂಬುದು, ಅಣೋರಣೀಯಾನ್ಮಹತೋ ಮಹೀಯಾನ್ ಎಂಬುದು, ಎಲ್ಲಾ ದೃಷ್ಟದ ಲಕ್ಷದಲ್ಲಿ ಉಂಟೆಂಬುದು, ಉಭಯಭಾವದಲ್ಲಿ ತೋರಿ ಹರಿದಾಡುವುದು, ಅದು ಚಿತ್ತೋ, ಚಿದಾದಿತ್ಯನೋ, ವಸ್ತು ಭಾವವೋ ? ಇಂತೀ ಲಕ್ಷ ಅಲಕ್ಷಂಗಳೆಂಬ ಗೊತ್ತ ಮೆಟ್ಟಿ, ಬಟ್ಟಬಯಲಾದ ಕಾಮಧೂಮ ಧೂಳೇಶ್ವರನೊಳಗಾದೆ, ಆಗೆನೆಂಬ ಭಾವ ನಿಂದಲ್ಲಿ.
--------------
ಮಾದಾರ ಧೂಳಯ್ಯ
ಕುರುಹಿಟ್ಟಲ್ಲಿ ಅರಿವು ನಷ್ಟವಾಯಿತ್ತು. ಅರಿವ ನುಂಗಿದ ಕುರುಹು, ಇದಿರಭಾವಕ್ಕೊಡಲಾಯಿತ್ತು. ತನ್ಮಯ ನಷ್ಟವಾಗಿ, ಉಭಯದೋರದೆ ನಿಂದಲ್ಲಿ, ಆ ನಿಲವು ತಾನೆ, ಐಘಟದೂರ ರಾಮೇಶ್ವರಲಿಂಗ.
--------------
ಮೆರೆಮಿಂಡಯ್ಯ
ನರಕುಲ ಹಲವಾದಲ್ಲಿ, ಯೋನಿಯ ಉತ್ಪತ್ಯ ಒಂದೇ ಭೇದ. ಮಾತಿನ ರಚನೆ ಎಷ್ಟಾದಡೇನು ? ನಿಹಿತವರಿವುದು ಒಂದು ಭೇದ. ವಸ್ತು ಜಾತಿ ಗೋತ್ರ ವಿಶೇಷವೆಂಬಲ್ಲಿ, ದಿನರಾತ್ರಿಯೆಂಬ ಉಭಯವನಳಿವುದಕ್ಕೆ ತಮ ಬೆಳಗೆರಡೆಂಬವಲ್ಲದಿಲ್ಲ. ಕುಲ ಉಭಯಶಕ್ತಿ ಪುರುಷತ್ವವಲ್ಲದಿಲ್ಲ. ಬೇರೆ ಹಲವು ತೆರನುಂಟೆಂದಡೆ, ಮೀರಿ ಕಾಬ ಶ್ರುತ ದೃಷ್ಟ ಇನ್ನಾವುದು ? ಎಲ್ಲಕ್ಕೂ ನೀರು ನೆಲ ಸೂರ್ಯ ಸೋಮ ಆರೈದು ನೋಡುವ ದೃಷ್ಟಿಯೊಂದೆ ಬೊಂಬೆ. ಬೊಂಬೆ ಹಲವ ನೋಡಿಹೆ, ಬೊಂಬೆ ಹಲವಂದ ಕಾಣ್ಬಂತೆ, ಅದರಂಗವ ತಿಳಿದು ನಿಂದಲ್ಲಿ, ಹಲವು ಕುಲದ ಹೊಲೆಯೆಂದೂ ಇಲ್ಲವೆಂದೆ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ
--------------
ವೀರ ಗೊಲ್ಲಾಳ/ಕಾಟಕೋಟ
ಮಾಯಾಗುಣ ರೂಪಾದಲ್ಲಿ ಮಲಕ್ಕೊಡಲಾಯಿತ್ತು ಮಲಸ್ಥರೂಪವಾಗಿ ನಿಂದಲ್ಲಿ ಬಲವಂತರೆಲ್ಲರು ಮಲದ ಬೆಂಬಳಿಯಲ್ಲಿ ಮರುಳಾದರು. ಮರುಳಾಟದಲ್ಲಿ ಮಾರಿ ಒಲವರವಾಗಿ ಮನ ಶುದ್ಧವಿಲ್ಲದವರ ಮನೆ ಮನೆಯಲ್ಲಿ ತನುವಿಕಾರವನಾಡಿಸುತ್ತೈದಾಳೆ. ಮಾರಿಯ ಮುರಿದು ದಾರಾವತಿಯ ಕೆಡಿಸಿ ಕೈಯ ಡಕ್ಕೆಯ ಗತಿಯ ಹಿಂಗಿ ಮಾಯೆಯ ಬಾಗಿಲ ಭ್ರಾಂತಿಯ ಬಿಟ್ಟಲ್ಲಿ ಕಾಲಾಂತಕ ಬ್ಥೀಮೇಶ್ವರಲಿಂಗವನರಿದುದು.
--------------
ಡಕ್ಕೆಯ ಬೊಮ್ಮಣ್ಣ
ಕಲ್ಲು ರತಿಯಿಂದ ರತ್ನವಾದಂತೆ, ಉದಕ ಸಾರವರತು ಲವಣವಾದಂತೆ, ವಾರಿ ವಾಯುವ ಸಂಗದಿಂದ ಬಲಿದಂತೆ, ಪೂರ್ವವನಳಿದು ಪುನರ್ಜಾತನಾದ ಮತ್ತೆ, ಎನ್ನವರೆಂದು ಬೆರಸಿದಲ್ಲಿ, ಆ ಗುಣ ಆಚಾರಕ್ಕೆ ಹೊರಗಾಯಿತ್ತು. ಮಾತೆ ಪಿತ ಸಹೋದರ ಬಂಧುಗಳೆಂದು ಮನ ಕೂರ್ತು ಬೆರಸಿದಲ್ಲಿ, ಆಚಾರಕ್ಕೆ ಭ್ರಷ್ಟ, ವಿಚಾರಕ್ಕೆ ದೂರ, ಪರಮಾರ್ಥಕ್ಕೆ ಸಲ್ಲ. ಇವನೆಲ್ಲವ ಕಳೆದುಳಿದು ನಿಂದಲ್ಲಿ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು, ಎನ್ನ ನಿಂದಲ್ಲಿ ನಿಲ್ಲಲೀಯದು, ಎನ್ನ ಕುಳಿತಲ್ಲಿ ಕುಳ್ಳಿರಲೀಯದು, ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ. ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ. ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ. ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ, ಎಂದು ನಿಮ್ಮನೊಡಗೂಡುವೆನಯ್ಯಾ.
--------------
ಬಸವಣ್ಣ
ಅಂಬುಜಾತ ದ್ವಾರವಳಿವೆಳವಾದಡೆ, ನಾದಕ್ಕೆ ಸಿಕ್ಕುಂಟೆ ಅಯ್ಯಾ? ಶರೀರ ಸಂಪದದಲ್ಲಿದ್ದಡೆ, ಅರಿವು ಮಹದಲ್ಲಿ ನಿಂದು, ನೆರೆ ವಸ್ತು ತಾನಾದಲ್ಲಿ, ಬೇರೊಂದೆಡೆಯುಂಟೆ? ಕರಣಂಗಳ ಹಿಂಡಿಗೆ ಉರಿಯೆದ್ದ ನೆಲೆ, ನಷ್ಟವಾಗಿಯಲ್ಲದೆ ಬೇರೊಂದ ಹಿಡಿಯಲಿಲ್ಲ. ಅದು ಘಟಿಸಿ ನಿಂದಲ್ಲಿ, ಐಘಟದೂರ ರಾಮೇಶ್ವರಲಿಂಗ ತಾನೆ.
--------------
ಮೆರೆಮಿಂಡಯ್ಯ
ವೇದದ ಉತ್ತರವ ವಿಚಾರಿಸಿ, ಶಾಸ್ತ್ರದ ಸಂದೇಹವ ನಿಬದ್ಧಿಸಿ ಪುರಾಣದ ಅಬ್ಥಿಸಂದ್ಥಿಯ ತಿಳಿದು ಇಂತಿವು ಮೊದಲಾದ ಆಗಮಂಗಳಲ್ಲಿ ಚಿಂತಿಸಿಯೆ ನೋಡಿ ಸಕಲಯುಕ್ತಿ ಶಬ್ದಸೂತ್ರಂಗಳಲ್ಲಿ ಪ್ರಮಾಣಿಸಿಯೆ ಕಂಡು ಮಾತುಗಂಟಿತನದಲ್ಲಿ ತರ್ಕಶಾಸ್ತ್ರಂಗಳಿಗೆ ಹೋಗದೆ ಪಂಚವಿಂಶತಿತತ್ವದೊಳಗಾದ ಆಧ್ಯಾತ್ಮ ಆದಿಭೌತಿಕವ ತಿಳಿದು ಪಂಚಭೂತಿಕದ ಸಂಚಿತ ಪ್ರಾರಬ್ಧ ಆಗಾಮಿಗಳ ಸಂಚಿನ ಸಂಕಲ್ಪವ ತಿಳಿದು ಪೃಥ್ವಿತತ್ವದ ಮಲ, ಅಪ್ಪುತತ್ವದ ಸಂಗ, ತೇಜತತ್ವದ ದಗ್ಧ, ವಾಯುತತ್ವದ ಸಂಚಲ, ಆಕಾಶತತ್ವದ ಬಹುವರ್ಣಕೃತಿ. ಇಂತೀ ಪಂಚಭೂತಿಕಂಗಳಲ್ಲಿ ತಿಳುವಳವಂ ಕಂಡು ಕರಂಡದಲ್ಲಿ ನಿಂದ ಗಂಧದಂತೆ ತನ್ನಂಗವಿಲ್ಲದೆ ಗಂಧ ತಲೆದೋರುವಂತೆ ವಸ್ತುಘಟಭೇದವಾದ ಸಂಬಂಧ. ಇಂತೀ ತೆರನ ತಿಳಿದು ವಾಗ್ವಾದಂಗಳಲ್ಲಿ ಹೋರಿಹೆನೆಂದಡೆ ಮಹಾನದಿಯ ವಾಳುಕದ ಮರೆಯ ನೀರಿನಂತೆ ಚೆಲ್ಲಿ ಕಂಡೆಹೆನೆಂದಡೆ ಆ ನದಿವುಳ್ಳನ್ನಕ್ಕ ಕಡೆಗಣಿಸಬಾರದು. ನಿಂದಲ್ಲಿ ಪ್ರಮಾಣುವಿಂದಲ್ಲದೆ ಮೀರಿ ತುಂಬದಾಗಿ ಇಂತೀ ಶ್ರುತ್ಯರ್ಥವಿಚಾರದಿಂದ ಹಾಕಿದ ಮುಂಡಿಗೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಲ್ಲದಿಲ್ಲಾಯೆಂದು.
--------------
ಪ್ರಸಾದಿ ಭೋಗಣ್ಣ
ಕಾಯವುಳ್ಳನ್ನಕ್ಕ ಮಾಡುವುದು ಲಿಂಗಪೂಜೆಯ, ಜೀವವುಳ್ಳನ್ನಕ್ಕ ಅರಿವುದು ಅಭೇದ್ಯ ವಸ್ತುವ, ಉಭಯವ ಕಡೆಗಾಣಿಸಿ ನಿಂದಲ್ಲಿ ಸದಾಶಿವಮೂರ್ತಿಲಿಂಗವೆಂದು ಕುರುಹಿಡಲಿಲ್ಲ.
--------------
ಅರಿವಿನ ಮಾರಿತಂದೆ
ತನ್ನ ನೇಮಿಸಿ ಕಳಿವಿದಖಂಡಪರಶಿವನು ತನ್ನಿಂದೆ ತಾ ಬಂದು ನಿಂದಲ್ಲಿ, ತನತನಗೆ ಬಂದ ಬಂಧವನರಿದು ಹಿಂದುಮುಂದರಿಯದೆ ಚಂದಚಂದದಲಿ ಅರ್ಪಿಸಿಕೊಂಡು ಸುಖಿಸುವನಲ್ಲದೆ, ಒಂದನರಿಯದೆ ಸಂದವರೆಂದು, ಬಂದ ಬಂದ ಪದಾರ್ಥವನು, ಸಂದ್ಥಿ ಸಂದ್ಥಿಸಿ ಕೊಟ್ಟು ಕೊಂಡು, ಬೆಂದುಹೋಗುವ ಮಂದಮತಿಯಂತಲ್ಲ ಗುರುನಿರಂಜನ ಚನ್ನಬಸವಲಿಂಗ ನಿಮ್ಮ ಪ್ರಸಾದಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನಷ್ಟು ... -->
Some error occurred