Some error occurred
ಅಥವಾ

ಒಟ್ಟು 88 ಕಡೆಗಳಲ್ಲಿ , 27 ವಚನಕಾರರು , 61 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು1121112123214412211111751111ಒಟ್ಟು10ಅಕ್ಕಮಹಾದೇವಿ37ಅಂಬಿಗರಚೌಡಯ್ಯ3ಅಲ್ಲಮಪ್ರಭುದೇವರು125ಆಯ್ದಕ್ಕಿಮಾರಯ್ಯ65ಇಮ್ಮಡಿಮುರಿಘಾಗುರುಸಿದ್ಧ/ಗುರುಸಿದ್ಧಸ್ವಾಮಿ 32ಉರಿಲಿಂಗಪೆದ್ದಿ21ಕಾಡಸಿದ್ಧೇಶ್ವರ 97ಕುಷ್ಟಗಿಕರಿಬಸವೇಶ್ವರ 45ಗುಮ್ಮಳಾಪುರದಸಿದ್ಧಲಿಂಗ 35ಗುರುಸಿದ್ಧದೇವರು 72ಘನಲಿಂಗಿದೇವ 7ಚನ್ನಬಸವಣ್ಣ30ತೋಂಟದಸಿದ್ಧಲಿಂಗಶಿವಯೋಗಿಗಳು 27ದಾಸೋಹದಸಂಗಣ್ಣ 11ದೇಶಿಕೇಂದ್ರಸಂಗನಬಸವಯ್ಯ 1ಬಸವಣ್ಣ41ಬಾಲಸಂಗಯ್ಯಅಪ್ರಮಾಣದೇವ74ಭರಿತಾರ್ಪಣದಚೆನ್ನಬಸವಣ್ಣ 80ಮಡಿವಾಳಪ್ಪ/ ಕಡಕೋಳಮಡಿವಾಳಪ್ಪ 64ಮುಮ್ಮಡಿಕಾರ್ಯೇಂದ್ರ/ಮುಮ್ಮಡಿಕಾರ್ಯಕ್ಷಿತೀಂದ್ರ 22ಶಾಂತವೀರೇಶ್ವರ25ಷಣ್ಮುಖಸ್ವಾಮಿ5ಸಿದ್ಧರಾಮೇಶ್ವರ42ಸ್ವತಂತ್ರಸಿದ್ಧಲಿಂಗ 12ಹಡಪದಅಪ್ಪಣ್ಣ 20ಹಡಪದಪ್ಪಣ್ಣಗಳಪುಣ್ಯಸ್ತ್ರೀಲಿಂಗಮ್ಮ107ಹಾವಿನಹಾಳಕಲ್ಲಯ್ಯ01020
ಶ್ರೀಗುರುಸ್ವಾಮಿ ಕರುಣಿಸಿಕೊಟ್ಟ ಇಷ್ಟಬ್ರಹ್ಮವೇ ಬಸವಣ್ಣನೆನಗೆ. ಆ ಬಸವಣ್ಣನೆ ನವಲಿಂಗಸ್ವರೂಪವಾಗಿಪ್ಪನಯ್ಯ. ಅದು ಹೇಗೆಂದಡೆ- ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವವೆಂದು ಇಂದ್ರಿಯಂಗಳಲ್ಲಿ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆನಿಸಿಪ್ಪನಯ್ಯ. ಅದು ಹೇಗೆಂದಡೆ- ನಾಸಿಕದಲ್ಲಿ ಅಂಗಲಿಂಗಸಂಗ ಚತುರ್ವಿಂಶತಿ ಸ್ವರೂಪನೊಳಕೊಂಡು ಆಚಾರಲಿಂಗವಾಗಿ ಎನ್ನ ನಾಸಿಕದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಜಿಹ್ವೆಯಲ್ಲಿ ಅಂಗಲಿಂಗಸಂಗ ಅಷ್ಟಾದಶ ಸ್ವರೂಪನೊಳಕೊಂಡು ಗುರುಲಿಂಗವಾಗಿ ಎನ್ನ ಜಿಹ್ವೆಯಲ್ಲಿ ಇಂಬುಗೊಂಡನಯ್ಯ ಬಸವಣ್ಣ. ನೇತ್ರದಲ್ಲಿ ಅಂಗಲಿಂಗಸಂಗ ಷೋಡಶ ಸ್ವರೂಪನೊಳಕೊಂಡು ಶಿವಲಿಂಗವಾಗಿ ಎನ್ನ ನೇತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ತ್ವಕ್ಕಿನಲ್ಲಿ ಅಂಗಲಿಂಗಸಂಗ ಸಪ್ತಾದಶ ಸ್ವರೂಪನೊಳಕೊಂಡು ಜಂಗಮಲಿಂಗವಾಗಿ ಎನ್ನ ತ್ವಕ್ಕಿನಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಶ್ರೋತ್ರದಲ್ಲಿ ಅಂಗಲಿಂಗಸಂಗ ತ್ರೆ ೈದಶ ಸ್ವರೂಪನೊಳಕೊಂಡು ಪ್ರಸಾದಲಿಂಗವಾಗಿ ಎನ್ನ ಶ್ರೋತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಹೃದಯದಲ್ಲಿ ಅಂಗಲಿಂಗಸಂಗ ತ್ರಯೋದಶ ಸ್ವರೂಪವನೊಳಕೊಂಡು ಮಹಾಲಿಂಗವಾಗಿ ಎನ್ನ ಹೃದಯದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ. ಇಂತಿವನರಿದು ಅರ್ಪಿಸಿದೆನಾಗಿ ಎನ್ನ ತನುವಿನಲ್ಲಿ ಶುದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಮನದಲ್ಲಿ ಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಪ್ರಾಣದಲ್ಲಿ ಪ್ರಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಶುದ್ಧಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಮುಳುಗಿದ್ದ ಭೇದವನರಿದು ಬೋಳಬಸವೇಶ್ವರನ ಅನುಭಾವ ಸಂಪರ್ಕದಿಂದ ಸಿದ್ಧೇಶ್ವರನ ಘನಪ್ರಕಾಶ ಸಾಧ್ಯವಾಯಿತ್ತಾಗಿ ಪರಂಜ್ಯೋತಿ ಮಹಾಲಿಂಗಗುರು ಸಿದ್ದಲಿಂಗಪ್ರಭುವಿನಲ್ಲಿ ಎರಡರಿಯದಿರ್ದೆನಯ್ಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ತನು ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಮನ ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಕಿವಿಗಳು ಕೇಳಿದ ಪದಾರ್ಥ ಲಿಂಗಾರ್ಪಿತವಲ್ಲ, ಕಂUಳು ನೋಡಿದ ಪದಾರ್ಥ ಲಿಂಗಾರ್ಪಿತವಲ್ಲ, ಘ್ರಾಣ ಸೋಂಕಿದ ಪದಾರ್ಥ ಲಿಂಗಾರ್ಪಿತವಲ್ಲ, ಜಿಹ್ವೆ ತಾಗಿದ ಪದಾರ್ಥ ಲಿಂಗಾರ್ಪಿತವಲ್ಲ. ಅಹುದೆಂಬುದ ನಡೆಯ (ನುಡಿಯ?), ಅಲ್ಲೆಂಬುದ ನುಡಿಯ, ಬೇಕು ಬೇಡೆಂಬುದಿಲ್ಲ, ಸಾವಯವೆಂಬುದಿಲ್ಲ. ನಿರವಯದಲ್ಲಿ ಸಕಲಭೋಗಂಗಳ ಭೋಗಿಸುವನು,
--------------
ಚನ್ನಬಸವಣ್ಣ
ದ್ರವ್ಯ ನೀನು ದ್ರವ್ಯಾರ್ಥ ನೀನು; ಪದ ನೀನು, ಪದಾರ್ಥ ನೀನು. ಸಕಲ ನೀನು ನಿಷ್ಕಲ ನೀನು. ಸಕಲ ನಿಷ್ಕಲಾತ್ಮಕ ಪರಿಪೂರ್ಣ ಶಿವನಲ್ಲದೆ ಅನ್ಯ ಭಿನ್ನಭಾವ ಉಂಟೆ ? ಸಕಲ ನಿಷ್ಕಲ ತತ್ವಂಗಳು; ನಿಮ್ಮೊಳಗೆ ಸಮಾಸವನೆಯ್ದುವೆವೆಂದು ತಮ್ಮ ತಮ್ಮ ಅಂಗದ ಮೇಲೆ ಸರ್ವಪದಾರ್ಥಂಗಳ ಹೆಸರಿಟ್ಟು ಹೊತ್ತುಕೊಂಡೈದಾವೆ ನೋಡಾ ! ಅದೆಂತೆಂದಡೆ: ``ದ್ರವ್ಯಾರ್ಥಂ ಚ ಮಹಾದೇವೋ ದ್ರವ್ಯರೂಪೋ ಮಹೇಶ್ವರಃ ಇತಿ ಮೇ ಭೇದನಂ ನಾಸ್ತಿ ಸರ್ವರೂಪಸ್ಸದಾಶಿವಃ'' _ ಇಂತೆಂದುದಾಗಿ_ನಾದ ನೀನು, ಬಿಂದು ನೀನು, ಕಳೆ ನೀನು, ಕಳಾತೀತ ನೀನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಒಳ್ಳೆ ಪದಾರ್ಥಬಂದಡೆ ನೀಡೆಂಬಿರಿ, ಕೀಳುಪದಾರ್ಥಬಂದಡೆ ಬೇಡೆಂಬಿರಿ. ಕಮ್ಮಾದರೆ ನೀಡೆಂಬಿರಿ, ಆ ಪದಾರ್ಥ ಹೆಚ್ಚಾದರೆ ಪ್ರಸಾದ[ವೆಂದು] ಕೈಕೊಂಬಿರಿ. ಕಡ್ಡಿ ಹರಳು ಮೊದಲಾದ ಕಠಿನಪದಾರ್ಥ ಬಂದಡೆ, ಜಿಹ್ವೆಯಲ್ಲಿ ತೊಂಬಲವನಾರಿಸಿಬಿಡುವಿರಿ. ಮಕ್ಷಿಕ ಮೊದಲಾದ ಕ್ರಿಮಿಗಳು ಬಿದ್ದರೆ ಆರೂ ಅರಿಯದ ಹಾಗೆ ತೆಗೆದು ಸಿಪ್ಪದೆ ವರಸದೆ ಕದ್ದು ಚಲ್ಲುವಿರಿ. ಇಂತಪ್ಪ ಮೂಳಹೊಲೆಯರು ಪ್ರಸಾದಿಗಳೆಂದಡೆ ಪರಶಿವಪ್ರಸಾದಿಗಳಾದ ಶಿವಶರಣರು ಊರ ಸೂಳೆಯರ ಹಾಟಹೊಯಿಸಿ ತಲೆಯಬೋಳಿಸಿ ಪಟ್ಟಿಯ ತೆಗೆದು ಅವರ ಎಡಗಾಲಕೆರ್ಪಿನಿಂದ ಘಟ್ಟಿಸಿ ಮೂಡಲದಿಕ್ಕಿಗೆ ಅಟ್ಟಿದರು ಕಾಣಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಳಾಮುಖಿ ಬಿಂದುವನೊಗೆದನು, ಅಣುವಿನಾಧಾರವನೊಗೆದನು, ಪ್ರಣವದಾಧಾರದಲ್ಲಿ ಮಹೀತಳವನೊಗೆದನು, ಮಧ್ಯನಾದದಲ್ಲಿ ಮರೀಚಕನನೊಗೆದನು. (ಸುನಾದದಲ್ಲಿ ಬಸವಣ್ಣನನೊಗೆದನು) ನನ್ನನೇಕೆ ಬಿಳಿದು ಮಾಡನಯ್ಯಾ ತನ್ನ ಬಿಳಿದಿನೊಳಯಿಂಕೆ ? ಎನ್ನ ಕರೆದುಕೊಂಡು ತನ್ನಂತೆ ಮಾಡನು. ನಾನು ಪ್ರಸಾದಿಬಸವಣ್ಣನ ಪದಾರ್ಥ ಪ್ರಸಾದ-ಪದಾರ್ಥವೆಂಬೆರಡರ ಸಂದಿನಲ್ಲಿ ಕೂಡಲಚೆನ್ನಸಂಗನ ಶರಣನು ಮಡಿವಾಳಮಾಚಯ್ಯ.
--------------
ಚನ್ನಬಸವಣ್ಣ
ಅಯ್ಯಗಳು ರುದ್ರಾಕ್ಷಿಯ ಕೊಟ್ಟ್ಲಲ್ಲಿ ಫಲವಲ್ಲದೆ, ಸುಮ್ಮನೆ ಧರಿಸಿದಲ್ಲಿ ಫಲವಿಲ್ಲ ನೋಡಾ, ಭಕ್ತನು ಪದಾರ್ಥ ನೀಡಿದಲ್ಲಿ ಫಲವಲ್ಲದೆ, ಬೇಡಿ ರುಚಿಸಿದಲ್ಲಿ ಫಲವಿಲ್ಲ ನೋಡಾ. ನಿನ್ನರಿವ ನಾನರಿತಲ್ಲಿ ಫಲವಲ್ಲದೆ, ಅರುಹಿಸಿದಲ್ಲಿ ಫಲವಿಲ್ಲ. ಅಹುದೆಂಬುದು ನ್ಕೀ, ಬಲ್ಲೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಕಂಗಳು ನೋಡಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ಕಿವಿಗಳು ಕೇಳಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ನಾಸಿಕ ಮುಟ್ಟಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ಜಿಹ್ವೆ ಸೋಂಕಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ಕೈಗಳು ಮುಟ್ಟಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ರೂಪು ರಸ ಗಂಧ ರುಚಿ ಸ್ಪರ್ಶವನು ಕೂಡಲಚೆನ್ನಸಂಗಯ್ಯಾ ನೀನರಿಯಲು ಪ್ರಸಾದವೆನಗೆ.
--------------
ಚನ್ನಬಸವಣ್ಣ
ಅಯ್ಯಾ, ಚಿದಂಗ ಚಿದ್ಘನಲಿಂಗ ಶಕ್ತಿ ಭಕ್ತಿ ಹಸ್ತ ಮುಖ ಪದಾರ್ಥ ಪ್ರಸಾದ ಎಂಬಿವಾದಿಯಾದ ಸಮಸ್ತ ಸಕೀಲಂಗಳ ನೆಲೆ ಕಲೆಯರಿಯದೆ, ಜಿಹ್ವಾಲಂಪಟಕ್ಕೆ ಆಹ್ವಾನಿಸಿ, ಗುಹ್ಯಾಲಂಪಟಕ್ಕೆ ವಿಸರ್ಜಿಸಿ, ಸಕಲೇಂದ್ರಿಯಮುಖದಲ್ಲಿ ಮೋಹಿಯಾಗಿ, ಸದ್ಗುರುಕರುಣಾಮೃತರಸ ತಾನೆಂದರಿಯದೆ ಬರಿದೆ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಗುರುಚರಪರವೆಂದು ಬೊಗಳುವ ಕುನ್ನಿಗಳ ನೋಡಿ ಎನ್ನ ಮನ ಬೆರಗು ನಿಬ್ಬೆರಗು ಆಯಿತ್ತಯ್ಯಾ, ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಪೃಥ್ವಿ ಅಂಗ, ಚಿತ್ತ ಹಸ್ತ, ನಾಸಿಕ ಮುಖ, ಗಂಧ ಪದಾರ್ಥ, ಆಚಾರಲಿಂಗಕರ್ಪಿತ ಭಕ್ತ. ಅಪ್ಪು ಅಂಗ, ಬುದ್ದಿ ಹಸ್ತ, ಜಿಹ್ವೆ ಮುಖ, ರುಚಿ ಪದಾರ್ಥ, ಗುರುಲಿಂಗಕರ್ಪಿತ ಮಹೇಶ್ವರ. ಅನಿಲ ಅಂಗ, ನಿರಹಂಕಾರ ಹಸ್ತ, ನೇತ್ರ ಮುಖ, ರೂಪು ಪದಾರ್ಥ, ಶಿವಲಿಂಗಕರ್ಪಿತ ಪ್ರಸಾದಿ. ಪವನ ಅಂಗ, ಮನ ಹಸ್ತ, ತ್ವಕ್ಕು ಮುಖ, ಸ್ಪರ್ಶ ಪದಾರ್ಥ, ಜಂಗಮಲಿಂಗಕರ್ಪಿತ ಪ್ರಾಣಲಿಂಗಿ. ವ್ಯೋಮ ಅಂಗ, ಜ್ಞಾನ ಹಸ್ತ, ಶ್ರೋತ್ರ ಮುಖ, ಶಬ್ದ ಪದಾರ್ಥ, ಪ್ರಸಾದಲಿಂಗಕರ್ಪಿತ ಶರಣ. ಹೃದಯ ಅಂಗ, ಭಾವ ಹಸ್ತ, ಅರ್ಥ ಮುಖ, ಪರಿಣಾಮ ಪದಾರ್ಥ, ಮಹಾಲಿಂಗಕರ್ಪಿತ ಐಕ್ಯ. ಇಂತೀ ಷಟ್‍ಸ್ಥಲವಳವಟ್ಟಾತನು ಪರಶಕ್ತಿಸ್ವರೂಪನು, ಆತನು ನಿಜಶಿವಯೋಗಸಂಪನ್ನನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ತಮ್ಮಿಚ್ಛೆಗೆ ಬಂದ ಪದಾರ್ಥ ಲಿಂಗದಿಚ್ಛೆ ಎಂಬರು; ತಮ್ಮಿಚ್ಛೆಗೆ ಬರದ ಪದಾರ್ಥ ಲಿಂಗದಿಚ್ಛೆ ಇಲ್ಲವೆಂಬರು. ಹೋದ ವಾಕ್ಕು ಶಿವಾಜ್ಞೆ ಎಂಬರು. ಇದ್ದ ಮಾತು ತನ್ನಾಜ್ಞೆ ಎಂಬರು, ಅದೆಂತಯ್ಯಾ? ಇಚ್ಛೆಗೆ ಒಳಗಾಗುವನಲ್ಲಯ್ಯಾ ಲಿಂಗವು. `ಶಿವೋ ದಾತಾ ಶಿವೋ ಭೋಕ್ತಾ' ಎಂಬುದ ತಿಳಿದು, ಲಿಂಗಮುಖಂದ ಬಂದ ಪದಾರ್ಥವ ಕೈಕೊಂಬಡೆ, ಅಚ್ಚ ಲಿಂಗೈಕ್ಯನೆಂಬೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಕೈಯಲ್ಲಿ ಮುಟ್ಟಿದ ಪದಾರ್ಥ ಕೈಯೊಳಗೆ ಐಕ್ಯ, ಕಂಗಳು ತಾಗಿದ ಪದಾರ್ಥ ಕಂಗಳೊಳೈಕ್ಯ, ನಾಲಗೆ ತಾಗಿದ ಪದಾರ್ಥ ನಾಲಗೆಯೊಳಗೈಕ್ಯ. ನೀಡುವ ಪರಿಚಾರಕರು ಬೇಸತ್ತರಲ್ಲದೆ ಆರೋಗಣೆಯ ಮಾಡುವ ದೇವನೆತ್ತಲೆಂದರಿಯನು. ಬ್ರಹ್ಮಾಂಡವನೊಡಲೊಳಗಡಗಿಸಿಕೊಂಡು ಬಂದ ದೇವಂಗೆ ಆರೋಗಣೆಯ ಮಾಡಿಸಿಹೆನೆಂಬ ಅಹಂಕಾರದಲ್ಲಿ ಇದ್ದೆನಾಗಿ, ನಾನು ಕೆಟ್ಟ ಕೇಡನೇನೆಂಬೆನಯ್ಯಾ ಕೂಡಲಸಂಗಮದೇವರ ತೃಪ್ತಿಯ ತೆರನ ಬಲ್ಲಡೆ ಹೇಳಾ ಮಡಿವಾಳ ಮಾಚಯ್ಯ.
--------------
ಬಸವಣ್ಣ
ಆತ್ಮವೆ ಅಂಗವಾದ ಐಕ್ಯಂಗೆ ಸದ್‍ಭಾವನೆ ಹಸ್ತ. ಆ ಹಸ್ತಕ್ಕೆ ಚಿಚ್ಛಕ್ತಿ , ಆ ಶಕ್ತಿಗೆ ಮಹಾಲಿಂಗ, ಆ ಲಿಂಗಕ್ಕೆ ಹೃದಯೇಂದ್ರಿಯವೆ ಮುಖ, ಆ ಮುಖಕ್ಕೆ ಸುತೃಪ್ತಿ ಪದಾರ್ಥ; ಆ ಪದಾರ್ಥವನು ಹೃದಯದಲ್ಲಿಹ ಮಹಾಲಿಂಗಕ್ಕೆ ಸಮರಸಭಕ್ತಿಯಿಂದರ್ಪಿಸಿ, ಆ ಪದಾರ್ಥವನು ಹೃದಯಲ್ಲಿಹ ಮಹಾಲಿಂಗಕ್ಕೆ ಸಮರಸ ಭಕ್ತಿಯಿಂದರ್ಪಿಸಿ ಆ ಸುತೃಪ್ತಿಪ್ರಸಾದವನು ಪಡೆದು ಸುಖಿಸುವಾತನೆ ಐಕ್ಯನು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಒಂದೇ ವೇಳೆ ಪುರುಷಾಹಾರ ಪ್ರಮಾಣಿನಲ್ಲಿ ಗಡಣಿಸಿಕೊಂಡು ಲಿಂಗಕ್ಕೆ ಕೊಟ್ಟು ಲಿಂಗವನವಧರಿಸಿಕೊಂಬಿರಿ. ಮತ್ತೊಂದು ಪದಾರ್ಥ ಬಂದರೆ ಮುಟ್ಟಿ ಅರ್ಪಿಸಲಮ್ಮರು. ಅದೇನು ಕಾರಣ? ಕೈಯೇನು ಎಂಜಲೆ? ಕೈಯೆಂಜಲಾದವಂಗೆ ಮೈಯೆಲ್ಲಾಯೆಂಜಲು. ಎಂಜಲೆಂದರೆ ಅಮೇಧ್ಯ. ಅಪವಿತ್ರಕಾಯದಮೇಲೆ ಲಿಂಗವ ಧರಿಸಿಕೊಂಡಿಪ್ಪಿರೆ? ಇಂತಪ್ಪ ಸಂದೇಹಿ ಮಾನವರ ನಿಮ್ಮ ಪ್ರಸಾದಿಗಳು ಮೆಚ್ಚರಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪಂಚಶತಕೋಟಿ ವಿಸ್ತೀರ್ಣ ಭೂಮಂಡಲ ಮೊದಲಾದ ನವಖಂಡಪೃಥ್ವಿಯೆಲ್ಲವು ಒಂದು ಭುವನದೊಳಡಗಿತ್ತು. ಇಂತಹ ಈರೇಳು ಭುವನವನೊಳಕೊಂಡ ಮಹಾಘನಕ್ಕೆ ಸಯದಾನವ ನೀಡಿಹೆನೆಂಬ ಸ್ವಾಮಿಯ ಮರುಳತನವನೇನೆಂಬೆನು ? ಕೂಡಲಚೆನ್ನಸಂಗಮದೇವರ ತೃಪ್ತಿಯ ತೆರನನೊಲಿವಡೆ ನೀವು ಬೋನ, ನಾನು ಪದಾರ್ಥ. ಇದರಿಂದ ಮೇಲೇನೂ ಘನವಿಲ್ಲ ಕಾಣಾ ಸಂಗನಬಸವಣ್ಣ.
--------------
ಚನ್ನಬಸವಣ್ಣ
ಪರಿಪಾಕವಾದ ಸಕಲಪದಾರ್ಥಂಗಳ ಹಸ್ತಪರುಷದಿಂದೆ ಶುದ್ಧಸಂಸ್ಕಾರವ ಮಾಡಿದಲ್ಲದೆ ಲಿಂಗಕ್ಕೆ ಅರ್ಪಿಸಲಾಗದು. ಅದೇನು ಕಾರಣವೆಂದಡೆ : ಹಸ್ತಪರುಷವಿಲ್ಲದ ಪದಾರ್ಥ ಉಚ್ಛಿಷ್ಟವೆನಿಸಿತ್ತು. ಹಸ್ತಪರುಷವಿಲ್ಲದ ಪದಾರ್ಥ ಪಂಚಭೂತ ಪ್ರಕೃತ ಜೀವಮಯವೆನಿಸಿತ್ತು. ಹಸ್ತಪರುಷವಿಲ್ಲದ ಪದಾರ್ಥ ಜೀರ್ಣಗೋಮಾಂಸವೆನಿಸಿತ್ತು. ಹಸ್ತಪರುಷವಿಲ್ಲದ ಪದಾರ್ಥ ಅಶುದ್ಧ ಕಿಲ್ಬಿಷವೆನಿಸಿತ್ತು. ಅದೆಂತೆಂದೊಡೆ : ``ಜಂಗಮಸ್ಯ ಕರಸ್ಪರ್ಶಾತ್ ಸರ್ವದ್ರವ್ಯಂ ಚ ಶುದ್ಧ್ಯತೇ | ಹಸ್ತಸ್ಪರ್ಶಂ ವಿನಾ ಪಾಕಂ ಕಿಲ್ಬಿಷಂ ಪ್ರೋಚ್ಯತೇ ಬುಧೈಃ ||'' ಎಂದುದಾಗಿ, ಇಂತಪ್ಪ ಪದಾರ್ಥದ ಪೂರ್ವಾಶ್ರಯವನು ಶಿವಮಂತ್ರ ಶ್ರೀ ವಿಭೂತಿಯಿಂದೆ ಕಳೆದು, ಶುದ್ಧಸಂಸ್ಕಾರವೆನಿಸಿ ಶಿವನೇತ್ರದಿಂದೆ ನೋಡಿ, ಶಿವಹಸ್ತದಿಂದೆ ಮುಟ್ಟಿ, ಶಿವಲಿಂಗಕ್ಕೆ ಅರ್ಪಿಸಿದಲ್ಲಿ ಶಿವಪ್ರಸಾದವೆನಿಸಿತ್ತು. ಆ ಶಿವಪ್ರಸಾದವನು ಶಿವಲಿಂಗಸನ್ನಿಹಿತನಾಗಿ ಶಿವಜಿಹ್ವೆಯಲ್ಲಿ ಭೋಗಿಸುವಾತನೆ ಶಿವಶರಣನು. ಆತನೆ ಶಿವಪ್ರಸಾದಿ, ಆತನೆ ಶಿವಾನುಭಾವಿ. ಇಂತಪ್ಪ ಭೇದವನರಿಯದೆ ಮಾಡುವ ಮಾಟವೆಲ್ಲವು ಜೀವಗಡಣದೊಳಗಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->
Some error occurred