ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾರಿದ್ಥಿಯ ಹೊಯ್ದು ಬೇರ್ಪಡಿಸಬಹುದೆ ? ಫಲದೊಳಗಣ ಬೀಜ ಬಲಿವುದಕ್ಕೆ ಮೊದಲೆ ತೆಗೆಯಬಹುದೆ ? ಮಹಾಘನವನರಿವುದಕ್ಕೆ ಮೊದಲೆ, ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನಹ ಪರಿ ಇನ್ನೆಂತೊ ? ಇಕ್ಷುದಂಡ ಬಲಿವುದಕ್ಕೆ ಮೊದಲೆ ತನಿರಸ ಬಹುದೆ ? ನಾನೆಂಬುದಕ್ಕೆ ಸ್ಥಾಣು, ಅಹುದಕ್ಕೆ ಭಾವದ ಬಲಿಕೆ ಇನ್ನಾವುದು, ನಿಃಕಳಂಕ ಮಲ್ಲಿಕಾರ್ಜುನಾ ?
--------------
ಮೋಳಿಗೆ ಮಾರಯ್ಯ
ತಿಲದೊಳಗಣ ತೈಲ, ಫಲದೊಳಗಣ ರಸ, ಹೇಮದೊಳಗಣ ಬಣ್ಣ, ಮಾಂಸದೊಳಗಣ ಕ್ಷೀರ, ಇಕ್ಷುದಂಡದ ಸಾರದ ಸವಿ, ಒಳಗು ಹೊರಗಾಗಿಯಲ್ಲದೆ ಕುಲದ ಸೂತಕ ಬಿಡದು. ಇಷ್ಟದಲ್ಲಿ ತೋರುವ ವಿಶ್ವಾಸ ದೃಷ್ಟವಾಗಿಯಲ್ಲದೆ, ಶಿಲೆಕುಲದ ಸೂತಕ ಬಿಡದು. ಬಿಡುವನ್ನಕ್ಕ ಜ್ಞಾನಶೂನ್ಯವಿಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಫಲದೊಳಗಣ ಮಧುರಗೋಪ್ಯದಂತಿದ್ದಿತ್ತು, ಚಂದ್ರಕಾಂತದ ಉದಕದ ತೆರನಂತಿದ್ದಿತ್ತು, ಮಯೂರನ ತತ್ತಿಯ ಚಿತ್ರದಂತಿದ್ದಿತ್ತು, ಶಿಶುಕಂಡ ಕನಸಿನ ಪರಿಯಂತಿದ್ದಿತ್ತು, ಕೂಡಲಚೆನ್ನಸಂಗಯ್ಯಾ [ನಿಮ್ಮ ನಿಲವು] ಫ ಸದ್ಗುರುಚಿತ್ತದ ಪದದಂತಿದ್ದಿತ್ತು.
--------------
ಚನ್ನಬಸವಣ್ಣ
-->