ಅಥವಾ

ಒಟ್ಟು 57 ಕಡೆಗಳಲ್ಲಿ , 3 ವಚನಕಾರರು , 57 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನು ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಮನ ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಕಿವಿಗಳು ಕೇಳಿದ ಪದಾರ್ಥ ಲಿಂಗಾರ್ಪಿತವಲ್ಲ, ಕಂUಳು ನೋಡಿದ ಪದಾರ್ಥ ಲಿಂಗಾರ್ಪಿತವಲ್ಲ, ಘ್ರಾಣ ಸೋಂಕಿದ ಪದಾರ್ಥ ಲಿಂಗಾರ್ಪಿತವಲ್ಲ, ಜಿಹ್ವೆ ತಾಗಿದ ಪದಾರ್ಥ ಲಿಂಗಾರ್ಪಿತವಲ್ಲ. ಅಹುದೆಂಬುದ ನಡೆಯ (ನುಡಿಯ?), ಅಲ್ಲೆಂಬುದ ನುಡಿಯ, ಬೇಕು ಬೇಡೆಂಬುದಿಲ್ಲ, ಸಾವಯವೆಂಬುದಿಲ್ಲ. ನಿರವಯದಲ್ಲಿ ಸಕಲಭೋಗಂಗಳ ಭೋಗಿಸುವನು,
--------------
ಚನ್ನಬಸವಣ್ಣ
ಇನ್ನು ಶರಣನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣ ಭೇದವೆಂತೆಂದಡೆ : ಆಕಾಶವೆ ಅಂಗವಾದ ಶರಣನ ಸುಜ್ಞಾನವೆಂಬ ಹಸ್ತದಲ್ಲಿ ಪ್ರಸಾದಲಿಂಗಕ್ಕೆ ಶ್ರೋತ್ರವೆಂಬ ಮುಖದಲ್ಲಿ ಪಾತ್ರದಲ್ಲಿ ಹುಟ್ಟಿದ ಸುನಾದಾಳಾಪನೆಯ ಶಬ್ದದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಭಕ್ತನಲ್ಲಿಯ ಐಕ್ಯಂಗೆ ಪೃಥ್ವಿಯಲ್ಲಿಯ ಆತ್ಮನೆ ಅಂಗ, ಆ ಅಂಗಕ್ಕೆ ಸುಚಿತ್ತದಲ್ಲಿಯ ಭಾವವೇ ಹಸ್ತ. ಆ ಹಸ್ತಕ್ಕೆ ಆಚಾರಲಿಂಗದಲ್ಲಿಯ ಮಹಾಲಿಂಗವೇ ಲಿಂಗ. ಆ ಮಹಾಲಿಂಗಮುಖದಲ್ಲಿ ಎಲ್ಲಾ ಗಂಧದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಪ್ರಾಣಲಿಂಗಿಯಲ್ಲಿಯ ಶರಣಂಗೆ ವಾಯುವಿನಲ್ಲಿಯ ಆಕಾಶವೇ ಅಂಗ. ಆ ಅಂಗಕ್ಕೆ ಸುಮನದಲ್ಲಿಯ ಸುಜ್ಞಾನವೇ ಹಸ್ತ. ಆ ಹಸ್ತಕ್ಕೆ ಜಂಗಮಲಿಂಗದಲ್ಲಿಯ ಪ್ರಸಾದಲಿಂಗವೇ ಲಿಂಗ. ಆ ಪ್ರಸಾದಲಿಂಗದಮುಖದಲ್ಲಿ ಮಿಶ್ರವಾದ ಸ್ಪರ್ಶನದ್ರವ್ಯವನು ಸಮರ್ಪಣವಂ ಮಾಡಿ, ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಭಕ್ತನಲ್ಲಿಯ ಪ್ರಸಾದಿಗೆ ಪೃಥ್ವಿಯಲ್ಲಿಯ ಅಗ್ನಿಯೇ ಅಂಗ. ಆ ಅಂಗಕ್ಕೆ ಸುಚಿತ್ತದಲ್ಲಿಯ ನಿರಹಂಕಾರವೇ ಹಸ್ತ, ಆ ಹಸ್ತಕ್ಕೆ ಆಚಾರಲಿಂಗದಲ್ಲಿಯ ಶಿವಲಿಂಗವೇ ಲಿಂಗ. ಆ ಶಿವಲಿಂಗಮುಖದಲ್ಲಿ ಚಿಗುರು ಮೊದಲಾದ ಪತ್ರೆಯ ಗಂಧದ್ರವ್ಯಮಂ ಸಮರ್ಪಣವ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ಮಹೇಶ್ವರನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣವೆಂತೆಂದಡೆ : ಅಪ್ಪುವೆ ಅಂಗವಾದ ಮಾಹೇಶ್ವರನು ಸುಬುದ್ಧಿಯೆಂಬ ಹಸ್ತದಲ್ಲಿ ಗುರುಲಿಂಗಕ್ಕೆ ಜಿಹ್ವೆಯೆಂಬ ಮುಖದಲ್ಲಿ ಓಗರಾದುರು ಚಿದ್ರವ್ಯವ ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಐಕ್ಯನಲ್ಲಿಯ ಮಾಹೇಶ್ವರಂಗೆ ಆತ್ಮನಲ್ಲಿಯ ಅಪ್ಪುವೇ ಅಂಗ. ಆ ಅಂಗಕ್ಕೆ ಭಾವದಲ್ಲಿಯ ಸುಬುದ್ಧಿಯೇ ಹಸ್ತ. ಆ ಹಸ್ತಕ್ಕೆ ಮಹಾಲಿಂಗದಲ್ಲಿಯ ಗುರುಲಿಂಗವೇ ಲಿಂಗ. ಆ ಗುರುಲಿಂಗದಮುಖದಲ್ಲಿ ರಸತೃಪ್ತಿದ್ರವ್ಯವನು ಸಮರ್ಪಣವಂ ಮಾಡಿ, ತೃಪ್ತಿಯನೇ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿರಂಜನಾತೀತಐಕ್ಯಂಗೆ ನಿರಂಜನಾತೀತವೇ ಅಂಗ, ನಿರಂಜನಾತೀತವೇ ಹಸ್ತ, ನಿರಂಜನಾತೀತವೆ ಮಹಾಲಿಂಗ. ನಿರಂಜನಾತೀತವೆಂಬ ಮುಖದಲ್ಲಿ ನಿರಂಜನಾತೀತಾನಂದವೆಂಬ ಸುಖವ ಸಮರ್ಪಣಂ ಮಾಡಿ, ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಐಕ್ಯನಲ್ಲಿಯ ಪ್ರಸಾದಿಗೆ ಆತ್ಮನಲ್ಲಿಯ ಅಗ್ನಿಯೇ ಅಂಗ. ಆ ಅಂಗಕ್ಕೆ ಭಾವದಲ್ಲಿಯ ನಿರಹಂಕಾರವೇ ಹಸ್ತ. ಆ ಹಸ್ತಕ್ಕೆ ಮಹಾಲಿಂಗದಲ್ಲಿಯ ಶಿವಲಿಂಗವೇ ಲಿಂಗ. ಆ ಶಿವಲಿಂಗದ ಮುಖದಲ್ಲಿ ರೂಪತೃಪ್ತಿದ್ರವ್ಯವನು ಸಮರ್ಪಣವಂ ಮಾಡಿ, ತೃಪ್ತಿಪ್ರಸಾದವನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿರಾಮಯ ಐಕ್ಯಂಗೆ ನಿರಾಮಯವೆ ಅಂಗ, ನಿರಾಮಯವೆ ಹಸ್ತ, ನಿರಾಮಯವೆ ಮಹಾಲಿಂಗ, ನಿರಾಮಯವೆಂಬ ಮುಖದಲ್ಲಿ ನಿರಾಮಯಾನಂದವೆಂಬ ಸುಖವನು ಸಮರ್ಪಣವ ಮಾಡಿ, ತೃಪ್ತಿಯನೆ ಭೋಗಿಸುವನು ನೋಡಾ. ಭೋಗಿಸಿ ನಿರಾಮಯಾತೀತವೆಂಬ ನಿರ್ವಯಲನೈದಿದನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಶರಣನಲ್ಲಿಯ ಮಾಹೇಶ್ವರಂಗೆ ಆಕಾಶದಲ್ಲಿಯ ಅಪ್ಪುವೇ ಅಂಗ. ಆ ಅಂಗಕ್ಕೆ ಸುಜ್ಞಾನದಲ್ಲಿಯ ಸುಬುದ್ಧಿಯೇ ಹಸ್ತ. ಆ ಹಸ್ತಕ್ಕೆ ಪ್ರಸಾದಲಿಂಗದಲ್ಲಿಯ ಗುರುಲಿಂಗವೇ ಲಿಂಗ. ಆ ಗುರುಲಿಂಗದಮುಖದಲ್ಲಿ ತಂತಿವಿಡಿದು ಹುಟ್ಟಿದ ನಾದದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿರಾಮಯ ಪ್ರಸಾದಿಗೆ ನಿರಾಮಯವೆ ಅಂಗ, ನಿರಾಮಯವೆ ಹಸ್ತ, ನಿರಾಮಯವೆ ಶಿವಲಿಂಗ. ನಿರಾಮಯವೆಂಬ ಮುಖದಲ್ಲಿ ನಿರಾಮಯಾನಂದವೆಂಬ ಸುಖವ ಸಮರ್ಪಣವ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆತ್ಮನೆ ಅಂಗವಾದ ಐಕ್ಯ ಭಾವವೆಂಬ ಹಸ್ತದಲ್ಲಿ ಮಹಾಲಿಂಗಕ್ಕೆ ಮನವೆಂಬ ಮುಖದಲ್ಲಿ ಪರಿಣಾಮ ಸಮರ್ಪಣವ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ. ಇದಕ್ಕೆ ಈಶ್ವರ್ದೋವಾಚ : ``ಆತ್ಮಾಂಗೋ ಭಾವಹಸ್ತೇನ ಐಕ್ಯಶ್ಚಾಪಿ ಮಹಾತ್ಮನೇ | ಹೃನ್ಮುಖೀ ಅರ್ಪಿತಂಚೈವ ಪದಾರ್ಥಂ ತೃಪ್ತಿಭೋಕ್ತವಾನ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಐಕ್ಯನಲ್ಲಿಯ ಶರಣಂಗೆ ಆತ್ಮನಲ್ಲಿಯ ಆಕಾಶವೇ ಅಂಗ. ಆ ಅಂಗಕ್ಕೆ ಭಾವದಲ್ಲಿಯ ಸುಜ್ಞಾನವೇ ಹಸ್ತ. ಆ ಹಸ್ತಕ್ಕೆ ಮಹಾಲಿಂಗದಲ್ಲಿಯ ಪ್ರಸಾದಲಿಂಗವೇ ಲಿಂಗ. ಆ ಪ್ರಸಾದಲಿಂಗಮುಖದಲ್ಲಿ ಶಬ್ದತೃಪ್ತಿದ್ರವ್ಯವನು ಸಮರ್ಪಣವಂ ಮಾಡಿ, ತೃಪ್ತಿಪ್ರಸಾದವನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಐಕ್ಯನಲ್ಲಿಯ ಪ್ರಾಣಲಿಂಗಿಗೆ ಆತ್ಮನಲ್ಲಿಯ ವಾಯುವೇ ಅಂಗ. ಆ ಅಂಗಕ್ಕೆ ಭಾವದಲ್ಲಿಯ ಸುಮನವೇ ಹಸ್ತ. ಆ ಹಸ್ತಕ್ಕೆ ಮಹಾಲಿಂಗದಲ್ಲಿಯ ಜಂಗಮಲಿಂಗವೇ ಲಿಂಗ. ಆ ಜಂಗಮಲಿಂಗದಮುಖದಲ್ಲಿ ಸ್ಪರ್ಶನತೃಪ್ತಿದ್ರವ್ಯವನು ಸಮರ್ಪಣವಂ ಮಾಡಿ, ತೃಪ್ತಿಪ್ರಸಾದವನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->