ಅಥವಾ

ಒಟ್ಟು 47 ಕಡೆಗಳಲ್ಲಿ , 15 ವಚನಕಾರರು , 43 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವಲಿಖಿತಕ್ಕೆ ಸಿಕ್ಕು-ವಕ್ರಗಳುಂಟೇನಯ್ಯ ? ಭವಭವದಲ್ಲಿ ಬಂದರು ಬ್ರಹ್ಮ ವಿಷ್ಣು ರುದ್ರರು, ಮಾರ್ಕಂಡೇಯಗೆ ಮರಣ ತಪ್ಪುವುದೆ ? ರವಿ ಚಂದ್ರರ್ಕಗಳಿಗೆ ರಾಹು ಕೇತು ಅಡರದೆ ಬಿಡುವುದೆ ? ಭುವನದ ಹೆಪ್ಪುವೊಡದು ಭೂತಳವೊಂದಾಗದೆ ? ದಿವಾರಾತ್ರಿಯೇಕ ದೀಪ್ತಿ ; ಏಕೋವರ್ಣ ಶಾಂತಕ್ಕೆ ಪವಿತ್ರ ಅಪವಿತ್ರ ಲೋಕಕ್ಕೆ ಬ್ಥಿನ್ನ ಕಾಣೈ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ಅಂಥ ಬ್ರಹ್ಮಾಂಡವ ಹದಿಮೂರುಲಕ್ಷದ ಮೇಲೆ ಸಾವಿರದ ನೂರಿಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅಕುಲಿಶವೆಂಬ ಭುವನ. ಆ ಭುವನದೊಳು ಅಚಲನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರರವತ್ತುಕೋಟಿ ಬ್ರಹ್ಮ-ವಿಷ್ಣು-ಇಂದ್ರ-ಚಂದ್ರಾದಿತ್ಯರಿಹರು. ಐನೂರರವತ್ತುಕೋಟಿ ರುದ್ರರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಬ್ರಹ್ಮ ಕುಮಾರ, ವಿಷ್ಣು ಅಬಳ, ಲೆಕ್ಕವಿಲ್ಲದ ರುದ್ರರು ನೋಡಾ. ದೇವರ್ಕಳೆಲ್ಲಾ ಗರ್ವದಲೈದಾರೆ, ಅವರೆತ್ತಬಲ್ಲರು ಶಿವನಾದಿಯಂತುವ? ಶಾಶ್ವತಪದಕ್ಕೆ ಸಲ್ಲದ ಕಾರಣ, ಇವರು ವೇಷಧಾರಿಗಳೆಂದಾತನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಂತಿರ್ದ ಬ್ರಹ್ಮದ ಅಂಗದಲ್ಲಿ ಜ್ಞಾನಚಿತ್ತು ಉದಯಿಸಿತ್ತು ನೋಡಾ. ಆ ಜ್ಞಾನಚಿತ್ತುವಿನಿಂದ ಪರಶಿವರು ಹುಟ್ಟಿದರು ನೋಡಾ. ಆ ಪರಶಿವರು ಹುಟ್ಟಿದಲ್ಲಿಗೆ ಸದಾಶಿವರು ಹುಟ್ಟಿದರು. ಆ ಸದಾಶಿವರು ಹುಟ್ಟಿದಲ್ಲಿಗೆ ಈಶ್ವರರು ಹುಟ್ಟಿದರು. ಆ ಈಶ್ವರರು ಹುಟ್ಟಿದಲ್ಲಿಗೆ ರುದ್ರರು ಹುಟ್ಟಿದರು. ಆ ರುದ್ರರು ಹುಟ್ಟಿದಲ್ಲಿಗೆ ವಿಷ್ಣುಗಳು ಹುಟ್ಟಿದರು. ಆ ವಿಷ್ಣುಗಳು ಹುಟ್ಟಿದಲ್ಲಿಗೆ ಬ್ರಹ್ಮರು ಹುಟ್ಟಿದರು. ಆ ಬ್ರಹ್ಮರು ಹುಟ್ಟಿದಲ್ಲಿಗೆ ಲೋಕಾದಿಲೋಕಂಗಳು ಸಚರಾಚರಂಗಳು ಹುಟ್ಟಿದವು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಂಥ ಬ್ರಹ್ಮಾಂಡವ ಮೂವತ್ತು ಮೂರುಲಕ್ಷದ ಮೇಲೆ ಸಾವಿರದ ಮುನ್ನೂರಾ ಇಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ದೌಷ್ಟ್ರಿಯೆಂಬ ಭುವನ. ಆ ಭುವನದೊಳು ಶಂಭುವೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರರವತ್ತು ಕೋಟಿ ಇಂದ್ರ ಬ್ರಹ್ಮ ನಾರಾಯಣರಿಹರು. ಆರುನೂರರವತ್ತು ಕೋಟಿ ರುದ್ರರು ವೇದಪುರುಷರು ಮುನೀಂದ್ರರು ಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ನಾಲ್ವತ್ತುಸಾವಿರದಮುನ್ನೂರಾತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಏಕಿಶಾನವೆಂಬ ಭುವನ. ಆ ಭುವನದೊಳು ಏಕರುದ್ರಮಹೇಶ್ವರನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರುಕೋಟಿ ಇಂದ್ರ ಬ್ರಹ್ಮ ನಾರಾಯಣ ರುದ್ರರು, ಇನ್ನೂರುಕೋಟಿ ಚಂದ್ರಾದಿತ್ಯರು ವೇದಪುರುಷರು, ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತಾರುಸಾವಿರದ ಮುನ್ನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಬಲಪ್ರಮದಿನಿಯೆಂಬ ಭುವನ. ಆ ಭುವನದೊಳು ಜ್ಯೋತಿರ್ಮಯನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಎಂಬತ್ತುಕೋಟಿ ಬ್ರಹ್ಮ ನಾರಾಯಣ ರುದ್ರರು, ವೇದಪುರುಷರು, ಮುನೀಂದ್ರರು, ನೂರಾ ಎಂಬತ್ತುಕೋಟಿ ಇಂದ್ರಚಂದ್ರಾದಿತ್ಯರು, ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೈದುಸಾವಿರದ ಇನ್ನೂರನಾಲ್ವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಏಕರುದ್ರವೆಂಬ ಭುವನ. ಆ ಭುವನದೊಳು ಕಾಲಾಂತಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಇಪ್ಪತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು, ಇಂದ್ರಚಂದ್ರಾದಿತ್ಯರು, ನೂರಾ ಇಪ್ಪತ್ತೈದುಕೋಟಿ ವೇದಪುರುಷರು, ಮುನೀಂದ್ರರು, ದೇವರ್ಕಳಿಹರು ನೋಡಾ, ಅಪ್ರಮಾಣಕೂಡಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿರಾಕಾರ ಪರವಸ್ತು ತನ್ನ ಲೀಲಾವಿನೋದದಿಂದ ಎರಡು ಮುಖದಿಂದ ಎರಡು ಸೃಷ್ಟಿಯ ಮಾಡಿದರು. ಒಂದು ಊಧ್ರ್ವಸೃಷ್ಟಿ, ಒಂದು ಅಧೋಸೃಷ್ಟಿ. ಅಧೋಸೃಷ್ಟಿ ಯಾವುದೆಂದಡೆ : ಅಂಡಜ ಪಿಂಡಜ ಜರಾಯುಜ ಉದ್ಭಿಜ ಇವು ನಾಲ್ಕು ಕೂಡಿ ಎಂಬತ್ತುನಾಲ್ಕು ಜೀವರಾಶಿಯ ಮಾಡಿದರು. ಸ್ವರ್ಗ ನರಕ ಇಹ ಪರ ಪುಣ್ಯ ಪಾಪ ಧರ್ಮ ಕರ್ಮ ಸತ್ಯ ಅಸತ್ಯ ಜ್ಞಾನ ಅಜ್ಞಾನ ಹೆಣ್ಣು ಗಂಡು ಹಿರಿದು ಕಿರಿದು ಉತ್ಪತ್ತಿ-ಸ್ಥಿತಿ-ಲಯಕ್ಕೆ ಅದ್ಥಿಕಾರಿಗಳಾದ ಬ್ರಹ್ಮ-ವಿಷ್ಣು-ರುದ್ರರು ಮಾಡಿಟ್ಟರು. ಇನ್ನು ಊಧ್ರ್ವಸೃಷ್ಟಿ ಹೇಗೆಂದಡೆ : ಅಸಂಖ್ಯಾತ ಮಹಾಪ್ರಮಥಗಣಂಗಳು, ಇವರಿಗೆ ಸ್ವರ್ಗ-ನರಕವಿಲ್ಲ, ಇಹ-ಪರವಿಲ್ಲ, ಪುಣ್ಯ-ಪಾಪವಿಲ್ಲ, ಧರ್ಮ-ಕರ್ಮವಿಲ್ಲ, ಹುಸಿ-ಖರೆಯಿಲ್ಲ, ಜ್ಞಾನ-ಅಜ್ಞಾನವಿಲ್ಲ, ಹೆಣ್ಣು-ಗಂಡುವಿಲ್ಲ, ಹಿರಿದು-ಕಿರಿದುವಿಲ್ಲ, ಉತ್ಪತ್ತಿ-ಸ್ಥಿತಿ-ಲಯವಿಲ್ಲ, ಅವರಿಗೆ ಬ್ರಹ್ಮ-ವಿಷ್ಣು ರುದ್ರರು ಇಲ್ಲ. ಅವರಿಗೆ ಮತ್ತಂ, ಆ ನಿರಾಕಾರ ಪರವಸ್ತು ತಾನೆ ಗುರು-ಲಿಂಗ-ಜಂಗಮವಾಗಿ ಗುರುವಿನಲ್ಲಿ ಉತ್ಪತ್ತಿ, ಲಿಂಗದಲ್ಲಿ ಸ್ಥಿತಿ, ಜಂಗಮದಲ್ಲಿ ನಿಜೈಕ್ಯರು. ಮತ್ತೆ ಪರಶಿವಮೂರ್ತಿ ತನ್ನ ವಿನೋದಕ್ಕೆ ಆಟವ ಆಡಬೇಕಾಗಿ ಮಹದಾಕಾಶವ ಮಂಟಪವ ಮಾಡಿ, ಆಕಾಶವ ಪರದೆಯ ಕಟ್ಟಿ, ಅಸಂಖ್ಯಾತ ಪ್ರಮಥಗಣಂಗಳಿಗೆ ಮೂರ್ತವ ಮಾಡಿಸಿ ಎಂಬತ್ತುನಾಲ್ಕುಲಕ್ಷ ಜೀವರಾಶಿಗಳನೆ ಸೂತ್ರವ ಮಾಡಿ ತಮ್ಮ ಕೈಯಲ್ಲಿ ಪಿಡಿದು, ಚಿತ್ರವಿಚಿತ್ರದಾಟವ ಆಡಿಸುತ್ತಿಹುದಕ್ಕೆ ಲೆಕ್ಕವಿಲ್ಲ, ಹೇಳುವುದಕ್ಕೆ ಅಸಾಧ್ಯ. ಆ ಪ್ರಮಥಗಣಂಗಳು ನೋಡಿ, ಆ ಬೊಂಬೆಗಳೇನು ಆಡಿಹವು ? ಸೂತ್ರಿಕನು ಆಡಿಸಿದ ಹಾಂಗೆ ಆಡ್ಯಾವು. ಆ ಗೊಂಬೆಗೆ ಸೂತ್ರವಲ್ಲದೆ ಶಿವನಿಲ್ಲ. ಆ ಗೊಂಬೆಯೊಳಗೆ ಶಿವನಿದ್ದರೆ, ಆಡಿಸುವುದು ಹ್ಯಾಂಗೆ ? ಇವೆಲ್ಲವು ಅನಿತ್ಯವೆಂದು ತಿಳಿದು ಪ್ರಮಥಗಣಂಗಳು ತಮ್ಮ ಲಿಂಗದಲ್ಲಿ ನಿಜ ಮೋಕ್ಷಿಗಳಾಗಿ ಶಾಂಭವಪುರಕ್ಕೆ ಹೋದ ಭೇದವ ಎನ್ನೊಳರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಅಂಥ ಬ್ರಹ್ಮಾಂಡವ ಅನಂತಕೋಟಿ ಬ್ರಹ್ಮಾಂಡವನೊಳಕೊಂಡುದೊಂದು ಕಾಲಾಗ್ನಿರುದ್ರವೆಂಬ ಭುವನ. ಆ ಭವನದೊಳು ಓಂಕಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಅನಂತಕೋಟಿ ರುದ್ರರು ಅನಂತಕೋಟಿ ಬ್ರಹ್ಮರು ಅನಂತಕೋಟಿ ನಾರಾಯಣರಿಹರು ನೋಡಾ. ಅನಂತಕೋಟಿ ಇಂದ್ರರು ಅನಂತಕೋಟಿ ಚಂದ್ರರು ಅನಂತಕೋಟಿ ವೇದಪುರುಷರು ಅನಂತಕೋಟಿ ಮುನೀಂದ್ರರು ಅನಂತಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಹತ್ತು ಸಾವಿರದ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಶಾಂತ್ಯತೀತೆಯೆಂಬ ಭುವನ. ಆ ಭುವನದೊಳು ದ್ವಿಪಾದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐವತ್ತುಕೋಟಿ ಬ್ರಹ್ಮ ನಾರಾಯಣ ರುದ್ರರು, ಐವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು, ನಾಲ್ವತ್ತು ಮೂರುಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನರರು ಸುರರು ನವಕೋಟಿಯುಗಗಳ ಪ್ರಳಯಕ್ಕೆ ಒಳಗಾಗಿ ಹೋದರು, ಒಳಗಾಗಿ ಹೋಹಲ್ಲಿ ಸುರಪತಿಗೆ ಪರಮಾಯು ನೋಡಿರೆ ! ಅಂಥ ಸುರಪತಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ, ಚಿಟ್ಟಜನೆಂಬ ಋಷಿಗೆ ಒಂದು ಚಿಟ್ಟು ಸಡಿಲಿತ್ತು ನೋಡಿರೆ ! ಅಂಥ ಚಿಟ್ಟನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಚಿಪ್ಪಜನೆಂಬ ಋಷಿಗೆ ಒಂದು ಚಿಪ್ಪು ಸಡಿಲಿತ್ತು ನೋಡಿರೆ ! ಅಂಥ ಚಿಪ್ಪಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಡೊಂಕಜನೆಂಬ ಋಷಿಗೆ ಒಂದು ಡೊಂಕು ಸಡಿಲಿತ್ತು ನೋಡಿರೆ ! ಅಂಥ ಡೊಂಕಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ರೋಮಜನೆಂಬ ಋಷಿಗೆ ಒಂದು ರೋಮ ಸಡಿಲಿತ್ತು ನೋಡಿರೆ ! ಅಂಥ ರೋಮಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಆದಿಬ್ರಹ್ಮಂಗೆ ಆಯುಷ್ಯವು ನೂರಾಯಿತ್ತು ನೋಡಿರೆ ! ಅಂಥ ಆದಿಬ್ರಹ್ಮ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಆದಿನಾರಾಯಣಂಗೆ ಒಂದು ದಿನವಾಯಿತ್ತು ನೋಡಿರೆ ! ಅಂಥ ಆದಿ ನಾರಾಯಣ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ರುದ್ರಂಗೆ ಕಣ್ಣೆವೆ ಹಳಚಿತ್ತು ನೋಡಿರೆ ! ಅಂಥ ರುದ್ರರು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಫಣಿಮುಖರೊಂದು ಕೋಟಿ, ಪಂಚಮುಖರೊಂದು ಕೋಟಿ, ಷಣ್ಮಮುಖರೊಂದು ಕೋಟಿ, ಸಪ್ತಮುಖರೊಂದು ಕೋಟಿ ಅಷ್ಟಮೂಖರೊಂದು ಕೋಟಿ, ನವಮುಖರೊಂದು ಕೋಟಿ ದಶಮುಖರೊಂದು ಕೋಟಿ_ ಇಂತಿವರೆಲ್ಲರ ಕೀರೀಟದಾಭರಣಂಗಳು ಬಿದ್ದವು ನೋಡಿರೆ ! ಅಂಥ ಸಪ್ತಕೋಟಿಗಳು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ನಂದಿವಾಹನರೊಂದು ಕೋಟಿ, ಭೃಂಗಿ ಪ್ರಿಯರೊಂದು ಕೋಟಿ ಚಂದ್ರಪ್ರಿಯರೊಂದು ಕೋಟಿ_ ಇಂತೀ ತ್ರಿಕೋಟಿಗಳ ತಲೆಗಳು ಬಾಗಿದವು ನೋಡಿರೆ ! ಅಂಥ ತ್ರಿಕೋಟಿಗಳ ತಲೆಗಳು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ ಕೂಡಲಚೆನ್ನಸಂಗಯ್ಯಾ ನಮ್ಮ ಬಸವಣ್ಣನೀ ಸುದ್ದಿಯನೇನೆಂದುವರಿಯನು
--------------
ಚನ್ನಬಸವಣ್ಣ
ಅಂಥ ಬ್ರಹ್ಮಾಂಡವ ಏಳುಸಾವಿರದ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮೋಚಿಕಾಯೆಂಬ ಭುವನ, ಆ ಭುವನದೊಳು ಮೋಹಸಂಹಾರನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮೂವತ್ತೈದುಕೋಟಿ ಇಂದ್ರಚಂದ್ರಾದಿತ್ಯರು, ಮೂವತ್ತೈದುಕೋಟಿ ಬ್ರಹ್ಮನಾರಾಯಣ ರುದ್ರರು, ಮೂವತ್ತೈದುಕೋಟಿ ವೇದಪುರುಷರು ಮುನೀಂದ್ರರು, ನಾಲ್ವತ್ತುಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಹದಿನೇಳುಸಾವಿರದ ನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸೂಕ್ಷ್ಮವೆಂಬ ಭುವನ. ಆ ಭುವನದೊಳು ಶೂನ್ಯಕಾಯನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಬತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು, ಎಂಬತ್ತೈದುಕೋಟಿ ಇಂದ್ರ ಚಂದ್ರಾದಿತ್ಯರು, ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಹದಿಮೂರುಸಾವಿರದ ನೂರಾಯಿಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪ್ರತಿಷೆ*ಯೆಂಬ ಭುವನ. ಆ ಭುವನದೊಳು ಚತುಷ್ಪಾದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಅರವತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು, ಇಂದ್ರ ಚಂದ್ರಾದಿತ್ಯರು, ಅರವತ್ತೈದುಕೋಟಿ ವೇದಪುರುಷರು, ಮುನೀಂದ್ರರು, ನಾಲ್ವತ್ತಾರುಕೋಟಿ ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->