ಅಥವಾ

ಒಟ್ಟು 41 ಕಡೆಗಳಲ್ಲಿ , 1 ವಚನಕಾರರು , 41 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಥ ಬ್ರಹ್ಮಾಂಡವ ಹನ್ನೆರಡುಲಕ್ಷದ ಮೇಲೆ ಸಾವಿರದನೂರಾಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಹರಿಶ್ಚಂದ್ರವೆಂಬ ಭುವನ. ಆ ಭುವನದೊಳು ಹರಿಸಂಹಾರವೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರೈವತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ. ಐನೂರೈವತ್ತೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೈದುಲಕ್ಷದ ಮೇಲೆ ಸಾವಿರದಿನ್ನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭವವೆಂಬ ಭುವನ. ಆ ಭುವನದೊಳು ಭವದೂರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರಿಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಆರುನೂರಿಪ್ಪತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತೇಳುಲಕ್ಷದ ಮೇಲೆ ಸಾವಿರದೇಳುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪಾಶಹಸ್ತವೆಂಬ ಭುವನ. ಆ ಭುವನದೊಳು ಗಜಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಂಬತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಾ ಎಂಬತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಲಕ್ಷದ ಮೇಲೆ ಒಂಬೈನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವಿಧುವೇಶ್ವರವೆಂಬ ಭುವನ. ಆ ಭುವನದೊಳು ವಿಶ್ವೇಶ್ವರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಐನೂರುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂರುಲಕ್ಷದ ಮೇಲೆ ಸಾವಿರ ಇಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ನಾಖಲವೆಂಬ ಭುವನ. ಆ ಭುವನದೊಳು ನಾರಾಯಣಮರ್ದನನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರಹತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ. ಐನೂರಹತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೆರಡುಲಕ್ಷದ ಮೇಲೆ ಸಾವಿರದಿನ್ನೂರಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ವೀರಭದ್ರನೆಂಬ ಭುವನ. ಆ ಭುವನದೊಳು ಪ್ರಳಯಕಾಲನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಆರುನೂರೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತೊಂಬತ್ತುಸಾವಿರದ ಐನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅಜವೆಂಬ ಭುವನ. ಆ ಭುವನದೊಳು ಅಜಕಪಾಲಿಯೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ತೊಂಬತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಇನ್ನೂರಾ ತೊಂಬತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಆಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಹದಿನಾಲ್ಕುಲಕ್ಷದ ಮೇಲೆ ಸಾವಿರದನೂರಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮುಂಡಿಯೆಂಬ ಭುವನ. ಆ ಭುವನದೊಳು ರುಂಡಮಾಲಾಧರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರರವತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಐನೂರರವತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೊಂದುಲಕ್ಷದ ಮೇಲೆ ಸಾವಿರದಿನ್ನೂರ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಗಣವೆಂಬ ಭುವನ. ಆ ಭುವನದೊಳು ಗಣನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರಾನಲವತ್ತು ಕೋಟಿ ದೇವರ್ಕಳು ಇಂದ್ರಚಂದ್ರಾದಿತ್ಯರು ವೇದಪುರಷರು ಮುನೀಂದ್ರರಿಹರು ನೋಡಾ. ಆರುನೂರಾ ನಲವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತಾರುಸಾವಿರದ ಒಂಬೈನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅವಿಮುಕ್ತವೆಂಬ ಭುವನ. ಆ ಭುವನದೊಳು ಮುಕ್ತಾಂಗನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರೆಪ್ಪತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ನಾನೂರೆಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತೇಳು ಸಾವಿರದಾ ಏಳುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಗಾಂಧರ್ವವೆಂಬ ಭುವನ. ಆ ಭುವನದೊಳು ಉಗ್ರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಎಂಬತ್ತೈದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳು ಇಂದ್ರಚಂದ್ರಾದಿತ್ಯರಿಹರು ನೋಡಾ. ಮುನ್ನೂರ ಎಂಬತ್ತೈದು ಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೆಂಟುಲಕ್ಷದ ಮೇಲೆ ಸಾವಿರದಿನ್ನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ತ್ರಿಯಕ್ಷವೆಂಬ ಭುವನ. ಆ ಭುವನದೊಳು ಸಹಸ್ರಪಾದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರಾ ಮೂವತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಆರುನೂರಾ ಮೂವತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರುವತ್ತೇಳು ಲಕ್ಷದ ಮೇಲೆ ಸಾವಿರದಾ ಆರುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವಾಯುವೇಗವೆಂಬ ಭುವನ. ಆ ಭುವನದೊಳು ಭೂತನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಮೂವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಾ ಮೂವತ್ತುಕೋಟಿ ಇಂದ್ರಚಂದ್ರಾದಿತ್ಯರು, ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತೈದುಲಕ್ಷದ ಮೇಲೆ ಸಾವಿರದ ಮುನ್ನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಫಣೀಶವೆಂಬ ಭುವನ. ಆ ಭುವನದೊಳು ದಿಗಂಬರನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರೆಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಆರುನೂರೆಪ್ಪತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತೆರಡುಲಕ್ಷದ ಮೇಲೆ ಸಾವಿರದಾ ಐನೂರಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪ್ರಕಾಮದವೆಂಬ ಭುವನ. ಆ ಭುವನದೊಳು ಪ್ರನಾಥನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾ ಐವತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಏಳುನೂರಾ ಐವತ್ತೈದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳು ಇಂದ್ರಚಂದ್ರಾದಿತ್ಯರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->