ಅಥವಾ

ಒಟ್ಟು 8 ಕಡೆಗಳಲ್ಲಿ , 4 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವತಂತ್ರದಿಂದ ಸುಖದುಃಖಗಳು ಬರುತಿಹವೆಂದರಿಯದೆ ನರಗುರಿಗಳಿಗೆ, ರೋಗ ದಾರಿದ್ರ್ಯ ಅಪಜಯಂಗಳು ಬರುತ್ತಿರಲು ವಿಪ್ರಗೆ ಕೈಮುಗಿದು ಕಾಣಿಕೆಯನಿಕ್ಕಿ ತನ್ನ ಹೆಸರ ಹೇಳಿ ಸೂರ್ಯಬಲ ಚಂದ್ರಬಲ ಬೃಹಸ್ಪತಿಬಲ ನವಗ್ರಹಬಲವ ಕೇಳುವವರಿಗೆ ಎಲ್ಲಿಯದೋ ಶಿವಭಕ್ತಿ ? ಸೂರ್ಯನು ಜ್ಞಾನವುಳ್ಳ್ಳವನಾದಡೆ ಗೌತಮಮುನೀಶ್ವರನ ಹೆಂಡತಿ ಅಹಲ್ಯಾದೇವಿಗೆ ಮೋಹಿಸಿ ಮುನಿಯ ಶಾಪದಿಂದ ಕುಷ್ಟದೊಳಗಿಹನೆ ? ಳ ಅಲ್ಲದೆ ದಕ್ಷನ ಯಾಗದಲ್ಲಿ ಹಲ್ಲ ಹೋಗಲಾಡಿಸಿಕೊಂಬನೆ ? ಚಂದ್ರನು ಜ್ಞಾನವುಳ್ಳವನಾದಡೆ ಗುರುವಿನ ಹೆಂಡತಿಗೆ ಅಳುಪಿ ಕೊಂಡೊಯ್ದು ಜಾತಜ್ವರದಲ್ಲಿ ಅಳಲುತಿಹನೆ ? ಬೃಹಸ್ಪತಿ ಜ್ಞಾನವುಳ್ಳವನಾದಡೆ ಸಕಲ ಜ್ಯೋತಿಷ್ಯಗಳ ನೋಡಿ ವಿವಾಹವಾದ ಹೆಂಡತಿ ರೋಹಿಣೀದೇವಿಯ ಚಂದ್ರನೆತ್ತಿಕೊಂಡು ಹೋಹಾಗ ಸುಮ್ಮನಿದ್ದುದು ಏನು ಜ್ಞಾನ ? ಶನಿ ಜ್ಞಾನವಳ್ಳವನಾದಡೆ ಕುಂಟನಾಗಿ ಸಂಕೋಲೆ ಬೀಳ್ವನೆ ? ಅದು ಕಾರಣ_ ತಮಗೆ ಮುಂಬಹ ಸುಖದುಃಖಂಗಳನರಿಯದವರು ಮತ್ತೊಬ್ಬರ ಸುಖದುಃಖಂಗಳ ಮೊದಲೆ ಅರಿಯರು. ಬೃಹಸ್ಪತಿಯ ಮತದಿಂದೆ ದಕ್ಷ, ಯಾಗವನಿಕ್ಕೆ ಕುರಿದಲೆಯಾಯಿತ್ತು. ಬೃಹಸ್ಪತಿಯ ಮತದಿಂದೆ ದ್ವಾರಾವತ ನೀರಲ್ಲಿ ನೆರೆದು ಕೃಷ್ಣನ ಹದಿನಾರುಸಾವಿರ ಸ್ತ್ರೀಯರ ಹೊಲೆಬೇಡರು ಸೆರೆಯನೊಯ್ದರು, ಶ್ರೀರಾಮನ ಹೆಂಡತಿ ಸೀತಾಂಗನೆ ಸೆರೆಯಾದಳು. ಇಂತೀ ತಮತಮಗೆ ಮುಂದೆ ಬಹ ಅಪಜಯಂಗಳನರಿಯದ ಕಾರಣ, ಆ ಬೃಹಸ್ಪತಿ ಜ್ಞಾನಿಯ ಮತದಿಂದೆ, ಅಭಾಷ ಜೋಯಿಸರ ಮಾತ ಕೇಳಿ ಹುಣ್ಣಿಮೆ ಅಮವಾಸೆಯಲ್ಲಿ ಉಪವಾಸವಿದ್ದು, ಗ್ರಹಬಲವುಳ್ಳ ಶುಭಮುಹೂರ್ತದಲ್ಲಿ, ಅರಳಿಯ ಮರಕ್ಕೆ ನೀರ ಹೊಯ್ದು ನೂಲ ಸುತ್ತಿ ವಿಪ್ರಜೋಯಿಸರ್ಗೆ ಹೊನ್ನು ಹಣವ ಕೊಟ್ಟಡೆ, ಹೋದೀತೆಂಬ ಅನಾಚಾರಿಯ ಮಾತ ಕೇಳಲಾಗದು. `ವಸಿಷ್ಠೇನ ಕೃತೇ ಲಗ್ನೇ ವನೇ ರಾಮೇಣ ವಾಸಿತೇ ಕರ್ಮಮೂಲೇ ಪ್ರಧಾನೇ ತು ಕಿಂ ಕರೋತಿ ಶುಭಗ್ರಹಃ ' ಇಂತೆಂದುದಾಗಿ ಬಹ ಕಂಟಕವ ಹೊನ್ನು ಹೆಣ್ಣು ಶುಭ ಲಗ್ನದಿಂದೆ ಪರಿಹರಿಸೇನೆಂದಡೆ ಹೋಗಲರಿಯದು. ಹಸಿವಿಲ್ಲದ ಮದ್ದು ಕೊಟ್ಟೇನು, ಅಶನವ ನೀಡೆಂಬಂತೆ, ಖೇಚರದ ಮದ್ದು ಕೊಟ್ಟೇನು ತೊರೆಯ ದಾಂಟಿಸೆಂಬಂತೆ, ಕುರುಡನ ಕೈಯ ಕುರುಡ ಹಿಡಿದು ಹಾದಿಯ ತೋರುವಂತೆ, ಲಜ್ಜೆ ನಾಚಿಕೆ ಇಲ್ಲದೆ ವಿಪ್ರರ ಕೈಯೆ ಲಗ್ನವ ಕೇಳಲಾಗದು. ಸದ್ಭಕ್ತರಾದವರಿಗೆ ನಿಮ್ಮ ಬಲವೇ ಬಲವಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಹೋಗುವ ಬನ್ನಿರಯ್ಯ ; ಶಕ್ತಿಪಾತವಾದ ಶಿವಯೋಗೀಶ್ವರರು ಶಿವಭಕ್ತರು ಹೋಗುವ ಬನ್ನಿರಯ್ಯ. ಸುಕ್ಷೇತ್ರದಲ್ಲಿರ್ಪ ಮಹಲಿಂಗದರುಶನಕೆ ಹೋಗುವ ಬನ್ನಿರಯ್ಯ. ಜೀವಸಂಚಾರವೆಂಬ ಪ್ರಾಕೃತವೆನಿಸುವ ಅಧೋಕುಂಡಲಿಸ್ವರೂಪಮಾದ ಅಹಂ ಎಂಬ ಹೆಬ್ಬಟ್ಟೆಯಂ ಬಿಟ್ಟು, ಸಜ್ಜೀವವೆಂಬ ವೈಕೃತವೆನಿಸುವ ಮಧ್ಯಕುಂಡಲಿಸ್ವರೂಪಮಾದ ಸೋಹಮೆಂಬ ಸಣ್ಣಬಟ್ಟೆಯ ಹಿಡಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ಕೇವಲ ಶಿವಯೋಗವೆಂಬ ಏಕವೆನಿಸುವ ಊಧ್ರ್ವಕುಂಡಲಿಸ್ವರೂಪಮಾದ ಓಂ ಎಂಬ ನುಸುಳುಗಂಡಿಯಂ ನುಸಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ದ್ವಯಮಂಡಲವ ಭ್ರೂಮಧ್ಯವೆಂಬ ಮಹಾಮೇರುವ ಮಧ್ಯದಲ್ಲಿ ಏಕಮಂಡಲಾಕಾರ ಮಾಡಿ, ಆ ಕಮಲಮಧ್ಯದಲ್ಲಿ ಮೂರ್ತಿಗೊಂಡಿಪ್ಪ ಮಹಾಲಿಂಗದಲ್ಲಿ ಜೀವಪರಮರಿಬ್ಬರನೇಕಾರ್ಥವಂ ಮಾಡಿ, ಶಾಂಭವೀಮುದ್ರಾನುಸಂಧಾನದಿಂದೆ ಅಧೋಮುಖಕಮಲವೆಲ್ಲ ಊಧ್ರ್ವಮುಖವಾಗಿ, ಆ ಮಹಾಲಿಂಗವ ನೋಡುತಿರಲು ಆ ಕಮಲಸೂತ್ರವಿಡಿದಿಹ ಷಡಾಧಾರಚಕ್ರಂಗಳ ಊಧ್ರ್ವಮುಖವಾಗಿ ಆ ಕಮಲದಲ್ಲಿ ಅಡಗಿ, ಆ ಕಮಲದ ಎಸಳು ಐವತ್ತೆರಡಾಗಿ ಎಸೆವುತಿರ್ಪವು. ಪರಿಪೂರ್ಣ ಜ್ಞಾನದೃಷ್ಟಿಯಿಂ ಆ ಮಹಾಲಿಂಗಮಂ ನಿರೀಕ್ಷಿಸಲು ಆ ಕಮಲದಲ್ಲಿ ಮಹಾಲಿಂಗಸ್ವರೂಪಮಾಗಿ ಸಕಲ ಕರಣೇಂದ್ರಿಯಂಗಳು ಆ ಮಹಾಲಿಂಗದಲ್ಲಿಯೆ ಅಡಗಿ, ಸುನಾದಬ್ರಹ್ಮವೆಂಬ ಇಷ್ಟವೆ ಮಹಾಲಿಂಗವೆಂದರಿದು ನೋಡುತ್ತಿರಲು, ಜ್ಯೋತಿರ್ಮಯವಾಗಿ ಕಾಣಿಸುತಿಪ್ಪುದು. ಅದೇ ಜೀವಪರಮರೈಕ್ಯವು ; ಅದೇ ಲಿಂಗಾಂಗಸಂಬಂಧವು. ಆ ಮಹಾಲಿಂಗದ ಕಿರಣಂಗಳೆ ಕರಣಂಗಳಾಗಿ ಆ ಕಮಲವು ಅಧೋಮುಖವಾಗಿ ಆ ಮಹಾಲಿಂಗವು ತನ್ನ ನಿಜನಿವಾಸವೆನಿಸುವ `ಅಂತರೇಣ ತಾಲುಕೇ' ಎಂಬ ಶ್ರುತಿ ಪ್ರಮಾಣದಿ ತಾಲುಮೂಲದ್ವಾದಶಾಂತವೆಂಬ ಬ್ರಹ್ಮರಂಧ್ರದ ಮಧ್ಯದಲ್ಲಿ ಪ್ರಕಾಶಿಸುತ್ತಿರ್ಪುದೊಂದು ಶಿವಚಕ್ರವು. ಆ ಶಿವಚಕ್ರವೆ ಶಿವಲೋಕವೆನಿಸುವುದು. ಆ ಶಿವಲೋಕವೆ ಶಾಂಭವಲೋಕವೆನಿಸುವುದು. ಶಾಂಭವಲೋಕವೆ ಶಾಂಭವಚಕ್ರವೆನಿಸುವುದು. ಆ ಶಾಂಭವಚಕ್ರದಲ್ಲಿ ಆಧಾರವಾದಿ ಪಶ್ಚಿಮಾಂತ್ಯವಾದ ನವಚಕ್ರಂಗಳು ಸಂಬಂಧವಾಗಿರುತಿರ್ಪವು. ಅದು ಹೇಗೆಂದೊಡೆ ; ಆ ಶಾಂಭವಚಕ್ರಮಧ್ಯದ ಚತುರ್ದಳಾಗ್ರದಲ್ಲಿ ಅಗ್ನಿಮಂಡಲದಲ್ಲಿ ಅಷ್ಟದಳ ಇರ್ಪುವು. ಆ ಅಷ್ಟದಳ ಚತುರ್ದಳದಲ್ಲಿ `ವಶಷಸ' ಎಂಬ ನಾಲ್ಕಕ್ಷರಯುಕ್ತವಾದ ಆಧಾರಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ನ' ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ತಾರಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಗ್ನಿಮಂಡಲದ ಚತುರ್ದಳದ ಈಶಾನ್ಯ ದಳದಲ್ಲಿ `ಬ ಭ ಮ ಯ ರ ಲ' ಎಂಬ ಆರಕ್ಷರಯುಕ್ತವಾದ ಸ್ವಾದ್ಥಿಷ್ಠಾನಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಮ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದಂಡಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳಾಗ್ರದಲ್ಲಿ ಸೂರ್ಯಮಂಡಲವಿರ್ಪುದು. ಆ ಸೂರ್ಯಮಂಡಲದಲ್ಲಿ `ಡಢಣ ತಥದಧನ ಪಫ' ಎಂಬ ದಶಾಕ್ಷರಯುಕ್ತವಾದ ಮಣಿಪೂರಕಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಶಿ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಕುಂಡಲಾಕೃತಿಯಲ್ಲಿ ಸಂಬಂಧವಾಗಿರ್ಪುದು. `ಕಖಗಘಙ ಚಛಜಝಞ ಟಠ' ಎಂಬ ದ್ವಾದಶಾಕ್ಷರಯುಕ್ತವಾದ ಅನಾಹತಚಕ್ರವು ಸೂರ್ಯಮಂಡಲದಲ್ಲಿ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ವ'ಕಾರವು ಆ ಮಹಾಲಿಂಗಸ್ವರೂಪವಾದಪ್ರಣವದ ಅರ್ಧಚಂದ್ರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳದಮಧ್ಯದಲ್ಲಿ ಚಂದ್ರಮಂಡಲವಿರ್ಪುದು. ಆ ಚಂದ್ರಮಂಡಲದಲ್ಲಿ- `ಅ ಆ ಇ ಈ ಉ ಊ ಋ Iೂ ಲೃ ಲೂೃ ಏ ಐ ಓ ಔ ಅಂ ಅಃ' ಎಂಬ ಷೋಡಶಾಕ್ಷರಯುಕ್ತವಾದ ವಿಶುದ್ಧಿಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಯ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಮಹಾಲಿಂಗಕ್ಕೆ ಪೀಠಮಾಗಿರ್ದ ಬಿಂದುಯುಕ್ತಮಾದ ಪ್ರಣವವು ಆ ಮಹಾಲಿಂಗದ ಮುಂದಿರ್ದ `ಹಂ ಳಂ ಹಂ ಕ್ಷಂ' ಎಂಬ ಚುತವರ್ಣಾಕ್ಷರಯುಕ್ತವಾದ ಆಜ್ಞಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಓಂಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಜ್ಯೋತಿರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಚತುರ್ದಳವು ತ್ರಿದಳದಲ್ಲಿ ಕ್ಷ ಉ ಸ ಎಂಬ ತ್ರಯಕ್ಷರಯುಕ್ತವಾದ ಶಿಖಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ಕ್ಷ' ಕಾರವು ಆ ಮಹಾಲಿಂಗಸ್ವರೂಪವಾದ ಕುಂಡಲಾಕೃತಿ ಅರ್ಧಚಂದ್ರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಆ ಚತುರ್ದಳದ ಮಧ್ಯದಲ್ಲಿ ಬಟುವೆ ಏಕದಳವೆನಿಸಿಕೊಂಬುದು. ಆ ಏಕದಳದಲ್ಲಿ ಪಶ್ಚಿಮಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಹ್ರಾಂ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿ ಜ್ಯೋತಿರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಹೀಂಗೆ ಅಷ್ಟಚಕ್ರಂಗಳ ತನ್ನೊಳಗೆ ಗಬ್ರ್ಥೀಕರಿಸಿಕೊಂಡು ಬೆಳಗುತ್ತಿರ್ಪುದೊಂದು ಬ್ರಹ್ಮರಂಧ್ರಚಕ್ರವು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಹ್ರೀಂ ಕಾರಗಳು. ಆ ಹರದನಹಳ್ಳಿಯ ಪ್ರಭುಲಿಂಗಗುರುಸ್ವಾಮಿಯ ಶಿಷ್ಯರು ನಿಜಾನಂದ ಗುರುಚೆನ್ನಯ್ಯನವರು. ಆ ನಿಜಾನಂದ ಗುರುವಿನ [ಶಿಷ್ಯರು] ಗುರುಸಿದ್ಧವೀರೇಶ್ವರದೇವರು. ಆ ಸಿದ್ಧವೀರೇಶ್ವರದೇವರ ಕರಕಮಲದಲ್ಲಿ ಉದಯವಾದ ಬಾಲಸಂಗಯ್ಯನು ನಾನು. ಆ ನಿರಂಜನ ಗುರುವೆ ತಮ್ಮ ಕೃಪೆಯಿಂದ ತಮ್ಮಂತರಂಗದಲ್ಲಿರ್ದ ಅತಿರಹಸ್ಯವಾದ ಶಾಂಭವಶಿವಯೋಗವೆಂಬ ಮಹಾಜ್ಞಾನೋಪದೇಶಮಂ ಹರಗುರು ವಾಕ್ಯಪ್ರಮಾಣಿನಿಂ ಎನ್ನ ಹೃದಯಕಮಲದಲ್ಲಿ ಕರತಳಾಮಳಕದಂತೆ ತೋರಿ, ಆ ಹೃದಯಕಮಲಕರ್ಣಿಕಾಮಧ್ಯದಲ್ಲಿರ್ಪ ನಿರಂಜನಗುರುವೆ ನಿರಂಜನಮಹಾಲಿಂಗವೆಂದರಿದು ಆ ನಿರಂಜನಮಹಾಲಿಂಗವೆ ಕರಸ್ಥಲದಲ್ಲಿರ್ಪ ಸುನಾದಬ್ರಹ್ಮವೆಂಬ ಇಷ್ಟಲಿಂಗವೆಂದರಿದು, ಆ ಕರಸ್ಥಲದಲ್ಲಿರ್ಪ ಇಷ್ಟಲಿಂಗವೆ ತಾನೆಂದರಿದು ``ಮಂತ್ರಮಧ್ಯೇ ಭವೇತ್‍ಲಿಂಗಂ ಲಿಂಗಮಧ್ಯೇ ಭವೇತ್‍ಮಂತ್ರಂ | ಮಂತ್ರಲಿಂಗದ್ವಯಾದೇಕಂ ಇಷ್ಟಲಿಂಗಂತು ಶಾಂಕರಿ ||' ಎಂದುದಾಗಿ, ಎನ್ನ ಹೃತ್ಕಮಲಕರ್ಣಿಕಾಮಧ್ಯದಲ್ಲಿ ಶಾಂಭವೀಮುದ್ರಾನುಸಂಧಾನದಿಂದ ಆ ಲಿಂಗವೆ ಮಂತ್ರ, ಮಂತ್ರವೆ ಲಿಂಗವೆಂದರಿದು ಓಂ ಓಂ ಎಂದು ಶಿವಸಮಾದ್ಥಿಯ ಜಪಮಂ ಜಪಿಸುತ್ತ ಜ್ಯೋತಿರ್ಲಿಂಗಮಂ ಕೇಳುತ, ಜ್ಯೋತಿರ್ಲಿಂಗದೊಳು ಮುಳುಗಾಡುತ್ತಿರ್ದೆನಯ್ಯಾ ಬಸವಣ್ಣಪ್ರಿಯ ಚೆನ್ನಸಂಗಯ್ಯನೆಂಬ ಗುರುವಿನ ಕೃಪೆಯಿಂದ, ನಿಮ್ಮ ಶರಣರ ಪಡುಗ ಪಾದರಕ್ಷೆಯ ಹಿಡಿವುದಕ್ಕೆ ಯೋಗ್ಯನಾದೆನಯ್ಯ ನಿಮ್ಮ ಕೃಪೆಯಿಂದ.
--------------
ಭಿಕ್ಷದ ಸಂಗಯ್ಯ
ಮತ್ತೆಯುಮೀ ಶಿವಬೀಜಂ ಸ್ಥೂಲ ಸೂಕ್ಷ ್ಮಪರಂಗಳೆಂದು ಮೂದೆರನಾಗಿರ್ಪುದಿದಕ್ಕೆ ವಿವರಂ- ಸ್ಥೂಲಮೆನೆಯಕ್ಕರಂ. ಸೂಕ್ಷ ್ಮಮೆನೆಯಾಯಕ್ಷರದ ದನಿ. ಪರಮೆನೆ ಆಕಾರಾದಿ ಕ್ಷಕಾರಾಂತವಾದೈವತ್ತಕ್ಕರಂಗಳೊಳಗೆ ಪತ್ತು ಪತ್ತುಗಳು ವಿಭಾಗಿಸಿ, ಭೂಮ್ಯಾದಿ ಪಂಚಭೂತಂಗಳೊಡನೆ ಕಲಸುವುದೆಂತೆನೆ ತರದಿಂ ಅ ಆ ಇ ಈ ಉ ಊ ಋ Iೂ ಒ ಓ ಈ ಹತ್ತು ಪೃಥ್ವಿ. ಏ ಐ ಓ ಔ ಅಂ ಅಃ ಕ ಖ ಗ ಘ ಈ ಹತ್ತು ಅಪ್ಪು. ಙ ಚ ಛ ಜ ರುsು ಞ ಟ ಠ ಡ ಢ ಈ ಹತ್ತು ತೇಜಸ್ಸು. ಣ ತ ಥ ದ ಧ ನ ಪ ಫ ಬ ಭ ಈ ಹತ್ತು ವಾಯು. ಮ ಯ ರ ಲ ವ ಶ ಷ ಸ ಹ ಳ ಯೀ ಹತ್ತು ಆಕಾಶಂ. ಇಂತೈವತ್ತಕ್ಕರಂಗಳೈದು ಪೃತ್ವ ್ಯಪ್ತೇಜೋವಾಯ್ವಾಕಾಶಂಗಳಲ್ಲಿ ನ್ಯಸ್ತಂಗಳಾದವಿನ್ನುಳಿದೈದನೆಯ ಭೂತಸಂಜ್ಞಿತದಿಂ ಪಂಚಮವೆನಿಸಿದ ಪರಿಪೂರ್ಣವಾದ ಸಾಂತವೆ ಪರಮಿಂತು ಸ್ಥೂಲ ಸೂಕ್ಷ ್ಮ ಪರ ಸಂಜ್ಞೆಯ ನಿರೂಪಿಸಿದೆಯಯ್ಯಾ, ಪರಮ ಶಿವಲಿಂಗ ಪಾರ್ವತೀ ಸಮುತ್ಸಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇನ್ನು ಸೃಷ್ಟಿವರ್ಗನಿರೂಪಣಾನಂತರದಲ್ಲಿ ಸಂಹಾರವರ್ಗಮಂ ಪೇಳ್ವೆನೆಂತೆನೆ- ಕ್ಷಕಾರಾದ್ಯಕಾರಾಂತಮಾದಕ್ಷರಮಾಲಿಕೆಯೆ ಸಂಹಾರವರ್ಗಮೆನಿಕುಂ. ಅದರಲ್ಲಿ ಕ್ಷ ಳ ಹ ಸ ಷ ಶ ವ ಲ ರ ಯಂ ಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೊದಲವರ್ಗಮಿದು ಪೃಥ್ವಿ. ಮ ಭ ಬ ಫ ಪ ನ ಧ ದ ಥ ತಂಗಳೆಂಬೀ ಪತ್ತೆ ಸಂಹಾರಿವರ್ಗದೊಳೆರಡನೆಯ ವರ್ಗಮಿದಪ್ಪು. ಣ ಢ ಡ ಠ ಟ ಞ ರುsು ಜ ಛ ಚಂಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೂರನೆಯ ವರ್ಗಮಿದಗ್ನಿ. ಙ ಘ ಗ ಖ ಕಂಗಳೆಂಬೀವೈದುಂ ಸಂಹಾರವರ್ಗದಲ್ಲಿ ನಾಲ್ಕನೆಯ ವರ್ಗಮಿದು ವಾಯು, ಅಃ ಆಂ ಔ ಓ ಐ ಏ ಒ ಓ Iೂ ಋ ಊ ಉ ಈ ಇ ಆ ಅ ಎಂಬೀ ಪದಿನಾರೆ ಸಂಹಾರವರ್ಗದಲ್ಲಿಯೈದನೆಯ ವರ್ಗಮಿದಾಕಾಶ- ಮಿವೈದು ವರ್ಗಂಗಳನೊಳಕೊಂಡು ಸಂಹಾರವರ್ಗ ಮಿರ್ಪುದಿದಲ್ಲಿಯೆ ಸಮಸ್ತವಾದ ರುದ್ರಮಂತ್ರಗಳನುದ್ಧರಿಪುದಿದೀಗ ಸಂಹಾರವರ್ಗಂ. ಇಂತು ಸ್ಥಿತಿ ಸಂಹಾರ ತಾಮಸವರ್ಗ ವರ್ಗತ್ರಯಂಗಳಂ ನಿರವಿಸಿದೆಯಯ್ಯಾ, ನಿರಾಳ ನಿಶ್ಚಿಂತ ಪರಮ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಬಳಿಕ್ಕಮಾಜ್ಯಪ್ರಧಾರಿಕೆಯೆ ಅಜ್ಞಾಚಕ್ರಮೆನಿಕು- ಮಲ್ಲಿಯ ದ್ವಿಕೋಷ*ಂಗಳೆ ದ್ವಿದಳಂಗಳವರಲ್ಲಿ ಳ ಕ್ಷ ಎಂಬೆರಡಕ್ಕರಂಗಳ್ನೆಲಸಿರ್ಕುಮೆಂದು ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮತ್ತೆಯುಂ ವ ವಾರುಣಿ, ಶ ವಾಯುವಿ ಷ ರಕ್ಷೋವಧಾರಿಣಿ, ಸ ಸಹಜೆ ಇಂತೀ ಮಹಾಲಿಂಗಧಃಪಟ್ಟಿಕಾ ಸಂಜ್ಞಿತವಾದಾಧಾರಚಕ್ರದ ಚತುಷ್ಕೋಷ*ದಳ ನ್ಯಸ್ತ ಚತೂರುದ್ರಶಕ್ತಿಯ- ರಿನ್ನುಳಿದ ಹ ಲಕ್ಷ್ಮಿ ಳ ವ್ಯಾಪಿನಿಯರೆಂಬೀಯಿೂರ್ವಶಕ್ತಿಗಳೇ ಮಹಾಲಿಂಗದ ಶಕ್ತಿಯಾಜ್ಯಪ್ರಧಾರಿಕಾಸಂಜ್ಞಿತವಾದಾಜ್ಞಾಚಕ್ರದ ದ್ವಿಕೋಷ*ದಳ ನ್ಯಸ್ತರೆಂದು ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮತ್ತೆಯುಮೀ ಮಹಾಲಿಂಗದೂಧ್ರ್ವಪಟ್ಟಿಕಾಸಂಜ್ಞೆ ಯುನುಳ್ಳಾಧಾರಚಕ್ರದ ರುದ್ರಸ್ವರೂಪಮೆಂತೆನೆ- ವ ಬಕಂ, ಶ ಶ್ವೇತಂ, ಷ ಭೃಂಗ್ವೀಶಂ, ಸ ಲಕುಲೀಶ, ಳ ಶಿವಂ, ಕ್ಷ ಸಂವರ್ತಕಂ. ಈ ಷಡ್ವಿಧರುದ್ರರೊಳಗೆ ಮೊದಲ ನಾಲ್ವರೆ ಆಧಾರಚಕ್ರದ ಚತುಃಕೋಷ*ದಳ ನ್ಯಸ್ತ ರುದ್ರರು. ಉಳಿದಿರ್ವರೆ ಪೂರ್ವೋಕ್ತ ಮಹಾಲಿಂಗದಾದ್ಯಪ್ರದಾರಿಕಾ ದ್ವಿಕೋಷ*ದಳ ನ್ಯಸ್ತ ದ್ವಿರುದ್ರರೆಂದು ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಅಂಗ ಅನಂಗವೆಂಬೆರಡೂ ಅಳಿದು ನಿಜದಲ್ಲಿ ನಿಂದ ಲಿಂಗೈಕ್ಯನ ಅಂಗದಲುಳ್ಳ ಕ್ರೀಗಳೆಲ್ಲವೂ ಲಿಂಗಕ್ರೀಗಳು ನೋಡಾ. ಮನೋಲಯವಾಗಿಪ್ಪ ಲಿಂಗೈಕ್ಯನ ಅನುಭಾವವೆಲ್ಲವೂ ಜ್ಞಾನನಷ್ಟ ಶಬ್ದ ನೋಡಾ. ಳ ತನ್ನಲ್ಲಿ ತಾನು ತದ್ಗತವಾಗಿಪ್ಪ ಶಿವಯೋಗಿಗೆ ಭಿನ್ನವಿಲ್ಲ ನೋಡಾ_ ಗುಹೇಶ್ವರ ಸಾಕ್ಷಿಯಾಗಿ
--------------
ಅಲ್ಲಮಪ್ರಭುದೇವರು
-->