ಅಥವಾ

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ಶರಣನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣ ಭೇದವೆಂತೆಂದಡೆ : ಆಕಾಶವೆ ಅಂಗವಾದ ಶರಣನ ಸುಜ್ಞಾನವೆಂಬ ಹಸ್ತದಲ್ಲಿ ಪ್ರಸಾದಲಿಂಗಕ್ಕೆ ಶ್ರೋತ್ರವೆಂಬ ಮುಖದಲ್ಲಿ ಪಾತ್ರದಲ್ಲಿ ಹುಟ್ಟಿದ ಸುನಾದಾಳಾಪನೆಯ ಶಬ್ದದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ಮಹೇಶ್ವರನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣವೆಂತೆಂದಡೆ : ಅಪ್ಪುವೆ ಅಂಗವಾದ ಮಾಹೇಶ್ವರನು ಸುಬುದ್ಧಿಯೆಂಬ ಹಸ್ತದಲ್ಲಿ ಗುರುಲಿಂಗಕ್ಕೆ ಜಿಹ್ವೆಯೆಂಬ ಮುಖದಲ್ಲಿ ಓಗರಾದುರು ಚಿದ್ರವ್ಯವ ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ಪ್ರಾಣಲಿಂಗಿಯಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣದ ಭೇದವೆಂತೆಂದಡೆ : ವಾಯುವೆ ಅಂಗವಾದ ಪ್ರಾಣಲಿಂಗಿಗೆ ಸುಮನವೆಂಬ ಹಸ್ತದಲ್ಲಿ ಜಂಗಮಲಿಂಗದಲ್ಲಿ ತ್ವಕ್ಕೆಂಬ ಮುಖದಲ್ಲಿ ಶೈತ್ಯವಾದ ಸ್ಪರ್ಶನದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ಆ ಐಕ್ಯನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣ ಭೇದವೆಂತೆಂದಡೆ : ಆತ್ಮನೇ ಅಂಗವಾದ ಐಕ್ಯಂಗೆ ಭಾವವೆಂಬ ಹಸ್ತದಲ್ಲಿ ಮಹಾಲಿಂಗಕ್ಕೆ ಮನವೆಂಬ ಮುಖದಲ್ಲಿ ಪರಿಣಾಮದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೇ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ಪ್ರಸಾದಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣದ ಭೇದ ವೆಂತೆಂದಡೆ : ಅಗ್ನಿಯೆ ಅಂಗವಾದ ಪ್ರಸಾದಿಗೆ ನಿರಹಂಕಾರವೆಂಬ ಹಸ್ತದಲ್ಲಿ ಶಿವಲಿಂಗಕ್ಕೆ ನೇತ್ರವೆಂಬಮುಖದಲ್ಲಿ ಹರಿತವರ್ಣವಾದ ರೂಪದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
-->