ಅಥವಾ

ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಕಾರ ನಿರಾಕಾರವೆಂಬೆರಡೂ ಸ್ವರೂಪಂಗಳು ; ಒಂದು ಆಹ್ವಾನ, ಒಂದು ವಿಸರ್ಜನ, ಒಂದು ವ್ಯಾಕುಳ, ಒಂದು ನಿರಾಕುಳ. ಉಭಯಕುಳರಹಿತ ಗುಹೇಶ್ವರಾ_ನಿಮ್ಮ ಶರಣ ನಿಶ್ವಿಂತನು.
--------------
ಅಲ್ಲಮಪ್ರಭುದೇವರು
ಆಕಾರನಿರಾಕಾರವೆಂಬೆರಡೂ ತಾನೆ; ದಿಟ ದಿಟ ತಪ್ಪದು ಕೇಳಾ. ಆಕಾರಕ್ಕೆ ಭಾವವೆ ಪ್ರಾಣ (ಪ್ರಮಾಣ?) ನಿರಾಕಾರಕ್ಕೆ ಮಹಾಜ್ಞಾನವೆ ಪ್ರಾಣ (ಪ್ರಮಾಣ?)_ ಇಂತೀ ಉಭಯಕುಳಕ್ಕೆ ಇದು ಲಕ್ಷಣ ಕೇಳಾ. ಎರಡರೊಳಗೆ ಆವ ಮುಖದಲ್ಲಿ ಇಪ್ಪಾತನು, ಆ ಮುಖದಲ್ಲಿ ಶುದ್ಧನಾಗದನ್ನಕ್ಕರ ಗುಹೇಶ್ವರಲಿಂಗಕ್ಕೆ ದೂರ ಕೇಳಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
-->